Mysore
22
overcast clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

ಹಲವು ಜಿಲ್ಲೆಗಳಲ್ಲಿ ತಾಪಮಾನ ಇಳಿಕೆ, ಕೊರೆಯುವ ಚಳಿ; ನಗರವಾರು ವಿವರ ಇಲ್ಲಿದೆ

ಮೈಸೂರು: ರಾಜ್ಯದಲ್ಲಿ ಚಳಿಗಾಲ ಆರಂಭವಾಗಿದ್ದು, ವಿವಿಧೆಡೆ ಚುಮು ಚುಮು ಚಳಿಯು ಮೈಕೊರೆಯುತ್ತಿದೆ.  ಈ ಮಧ್ಯೆ ಡಿಸೆಂಬರ್‌ ಮತ್ತು ಜನವರಿ ಅಂತ್ಯದವರೆಗೆ ಚಳಿಯ ಅಬ್ಬರ ಜೋರಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಈ ಬಾರಿ ವಾಡಿಕೆಗಿಂತ 2 ರಿಂದ 3 ಡಿಗ್ರಿಯಷ್ಟು ಉಷ್ಣಾಂಶ ಕಡಿಮೆ ಇರಲಿದೆ. ರಾಜ್ದಯ ಹಲವು ಜಿಲ್ಲೆಗಳಲ್ಲಿ ಇಂದು (ನ.22) ಸಹ ಕನಿಷ್ಠ ಉಷ್ಣಾಂಶ 15 ಡಿಗ್ರಿ ಸೆಂಟೆಗ್ರೆಡ್‌ ಗಿಂತ ಕೆಳಗೆ ಇದೆ.

ವಿಜಯಪುರ, ಬಾಗಲಕೋಟೆ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬೀದರ್‌, ಬೆಳಗಾವಿ, ಧಾರವಾಡ, ರಾಯಚೂರು ಹಾಗೂ ಕಲಬುರಗಿ ಸೇರಿದಂತೆ ಹಲವು ಜಿಲ್ಲೆಗಳ್ಲಲಿ ಮುಂದಿನ ದಿನಗಳಲ್ಲಿ ಕನಿಷ್ಠ ಉಷ್ಣಾಂಶ 12 ಡಿಗ್ರಿ ಸೆಲ್ಸಿಯಸ್‌ವರೆಗೂ ಇಳಿಕೆಯಾಗಬಹುದು ಎಂದು ಹವಾಮಾನ ಇಲಾಖೆ ಹೇಳಿದೆ.

ಮಂಜಿನ ನಗರಿ ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್‌ ಇರಲಿದ್ದು, ಕನಿಷ್ಠ ತಾಪಮಾನ 13 ಡಿಗ್ರಿ ಸೆಲ್ಸಿಯಸ್‌ ಇರಲಿದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಇರಲಿದ್ದು, ಕನಿಷ್ಠ ತಾಪಮಾನ 17 ಡಿಗ್ರಿ ತಾಪಮಾನ ಇರಲಿದೆ.

ಇನ್ನೂ ಮೈಸೂರಿನಲ್ಲಿ ಗರಿಷ್ಠ 29 ಮತ್ತು ಕನಿಷ್ಠ 18 ಡಿಗ್ರಿ ಸೆಲ್ಸಿಯಸ್ ವರದಿಯಾಗಲಿದೆ. ಮಂಗಳೂರಿನಲ್ಲಿ ಗರಿಷ್ಠ 33 ಮತ್ತು ಕನಿಷ್ಟ 24, ಶಿವಮೊಗ್ಗದಲ್ಲಿ ಗರಿಷ್ಠ 31 ಮತ್ತು ಕನಿಷ್ಠ 16, ಬೆಳಗಾವಿಯಲ್ಲಿ ಗರಿಷ್ಠ 29 ಮತ್ತು ಕನಿಷ್ಠ 16 ತಪಾಮಾನ ವರದಿಯಾಗಲಿದೆ ಎಂದು ಹವಮಾನ ಇಲಾಖೆ ತಿಳಿಸಿದೆ.

ಕಳೆದ 24 ಗಂಟೆಯಲ್ಲಿ ಕಾರವಾರ ಮತ್ತು ವಿಜಯಪುರದಲ್ಲಿ ಕನಿಷ್ಠ ಉಷ್ಣಾಂಶ 12.2 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿದೆ. ದಕ್ಷಿಣ ಒಳನಾಡಿನಲ್ಲಿ ಇಬ್ಬನಿಯ ಜೋರಿದೆ. ಇನ್ನೂ ನವೆಂಬರ್‌ 26 ಮತ್ತು 27 ರಂದು ದಕ್ಷಿಣ ಒಳನಾಡಿನಲ್ಲಿ ಮಳೆಯಾಗುವ ಸಾಧ್ಯೆತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Tags: