Mysore
23
overcast clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

ಅಪರಾಧ ಚಟುವಟಿಕೆಗಳಲ್ಲಿ ಮೋದಿ ಭಾಗಿ ಆರೋಪ: ವರದಿಯಲ್ಲಿ ಹುರುಳಿಲ್ಲ ಎಂದ ಕೆನಡಾ ಸರ್ಕಾರ

ಹೊಸದಿಲ್ಲಿ: ಕೆನಡಾದಲ್ಲಿ ಖಲಿಸ್ತಾನ್‌ ಮುಖಂಡನ ಹತ್ಯೆ ಹಿಂದೆ ಭಾರತದ ಕೈವಾಡವಿದೆ ಎಂಬ ಆರೋಪಗಳಿಗೆ ಯಾವುದೇ ಪುರಾವೆಗಳು ಇಲ್ಲ ಎಂದು ಕೆನಡಾ ಸರ್ಕಾರ ಸ್ಪಷ್ಟನೆ ನೀಡಿದೆ.

ಖಲಿಸ್ತಾನ್‌ ಪ್ರತ್ಯೇಕವಾದಿ ಹರ್ದೀಪ್‌ ಸಿಂಗ್‌ ನಿಜ್ಜರ್‌ ಹತ್ಯೆ ಹಾಗೂ ಕೆನಡಾ ದೇಶದ ಅಪರಾಧ ಚಟುವಟಿಕೆಗಳಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿ, ವಿದೇಶಾಂಗ ಸಚಿವ ಎಸ್.ಜೈಶಂಕರ್‌ ಮತ್ತು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್‌ ದೋವಲ್‌ ಶಾಮೀಲಾಗಿದ್ದಾರೆ ಎಂಬ ಆರೋಪಕ್ಕೆ ಬಲವಾದ ಸಾಕ್ಷಿ ಪುರಾವೆಗಳು ಇರಲಿಲ್ಲ ಎಂದು ಕೆನಾಡ ಪ್ರಧಾನಿ ಜಸ್ಟಿನ್‌ ಟ್ರುಡೊ ಈಚೆಗೆ ಒಪ್ಪಿಕೊಂಡಿದ್ದರು. ಆದರೆ ಗುಪ್ತಚರ ಮಾಹಿತಿ ಮಾತ್ರ ಇತ್ತು ಎಂದು ಅವರು ಹೇಳಿದ್ದರು.

ವಿದೇಶಿ ಶಕ್ತಿಗಳ ಹಸ್ತಕ್ಷೇಪ ಕುರಿತ ಇತ್ತೀಚಿನ ವಿಚಾರಣೆಗೆ ಹಾಜರಾಗಿದ್ದ ಟ್ರುಡೊ, ಭಾರತದ ರಾಜತಾಂತ್ರಿಕರು ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಕುರಿತು ಭಿನ್ನಾಭಿಪ್ರಾಯ ಹೊಂದಿರುವ ಕೆನಡಾ ಪ್ರಜೆಗಳ ಬಗ್ಗೆ ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಆ ಮಾಹಿತಿಯನ್ನು ಅವರು ಭಾರತ ಸರ್ಕಾರದ ಅತ್ಯುನ್ನತ ಹಂತಗಳಲ್ಲಿ ಇರುವವರಿಗೆ ಹಾಗೂ ಲಾರೆನ್ಸ್‌ ಬಿಷ್ಣೋಯ್‌ ಗ್ಯಾಂಗ್‌ನಂಹತ ಕ್ರಿಮಿನಲ್‌ ಸಂಘಟನೆಗಳಿಗೆ ರವಾನಿಸುತ್ತಿದ್ದಾರೆ ಎಂದು ಆರೋಪಿಸಿದ್ದರು.

Tags: