Mysore
28
scattered clouds

Social Media

ಶುಕ್ರವಾರ, 20 ಡಿಸೆಂಬರ್ 2024
Light
Dark

ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ: ತನಿಖಾ ವಿವರ ಸಲ್ಲಿಸುವಂತೆ ಎಸ್‌ಐಟಿಗೆ ನೋಟಿಸ್‌ ನೀಡಿದ ಹೈಕೋರ್ಟ್‌

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿಗೆ ತನಿಖಾ ವರದಿ ಸಲ್ಲಿಸುವಂತೆ ಹೈಕೋರ್ಟ್‌ನ ಏಕ ಸದಸ್ಯ ಪೀಠವೂ ನೋಟಿಸ್‌ ಜಾರಿ ಮಾಡಿದೆ.

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣವನ್ನು ಸಿಬಿಐ ತನಿಖೆಗೆ ಕೋರಿ ಯೂನಿಯನ್‌ ಬ್ಯಾಂಕ್‌ ಹಾಗು ಶಾಸಕರಾದ ಬಸವನಗೌಡ ಪಾಟೀಲ್‌ ಯತ್ನಾಳ್‌, ರಮೇಶ್‌ ಜಾರಕಿಹೊಳಿ, ಬಿಜೆಪಿ ನಾಯಕರಾದ ಅರವಿಂದ ಲಿಂಬಾವಳಿ ಮತ್ತು ಕುಮಾರ್‌ ಬಂಗಾರಪ್ಪ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಈ ಅರ್ಜಿಯನ್ನು ನವೆಂಬರ್‌ 13 ರಂದು ವಿಚಾರಣೆ ನಡೆಸಿದ್ದ ಹೈಕೋರ್ಟ್‌ ಸಿಬಿಐಗೆ ತನಿಖೆಗೆ ವಹಿಸುವುದನ್ನು ನಿರಾಕರಿಸಿತ್ತು. ಆದರೆ ಇದೀಗ ಕೋರ್ಟ್‌ನ ಏಕ ಸದಸ್ಯ ಪೀಠವೂ ಎಸ್‌ಐಟಿ ತಂಡಕ್ಕೆ ತನಿಖೆಯ ವಿವರ ಸಲ್ಲಿಸುವಂತೆ ಆದೇಶ ಹೊರಡಿಸಿದೆ.

Tags: