ವಯನಾಡು: ವಯನಾಡು ಲೋಕಸಭಾ ಕ್ಷೇತ್ರಕ್ಕೆ ನಡೆದ ಉಪ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ನಡೆಯುತ್ತಿದೆ. ರಾಹುಲ್ ಗಾಂಧಿ ಸೋದರಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ತಮ್ಮ ಚೊಚ್ಚಲ ಸ್ಪರ್ಧೆಯಲ್ಲಿ ಗೆಲುವು ಪಡೆಯಲಿದ್ದಾರೇ ಎಂಬುದಕ್ಕೆ ಮತ ಎಣಿಕೆ ತೆರೆ ಎಳೆಯಲಿದೆ.
ಮತ ಎಣಿಕೆ ಆರಂಭಗೊಂಡಿದ್ದು, ಕಾಂಗ್ರೆಸ್‌ನ ಪ್ರಿಯಾಂಕಾ ಗಾಂಧಿ ಅವರು 57 ಸಾವಿರ ಮತಗಳ ಅಂತರದ ಮುನ್ನಡೆ ಕಾಯ್ದುಕೊಂಡಿದ್ದಾರೆ.
ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್ ಅಭ್ಯರ್ಥಿ ಸತ್ಯನೆ ಮೊಕೇರಿ ಮತ್ತು ಎನ್‌ಡಿಎ ಅಭ್ಯರ್ಥಿ ನವ್ಯಾ ಹರಿದಾಸ್ ಕಣದಲ್ಲಿದ್ದಾರೆ.
ಒಟ್ಟು 16 ಅಭ್ಯರ್ಥಿಗಳು ಕಣದಲ್ಲಿದ್ದು, ಪ್ರಿಯಾಂಕ ಅವರ ಫಲಿತಾಂಶದ ಮೇಲೆ ಇಡೀ ದೇಶದ ಚಿತ್ತ ನೆಟ್ಟಿದೆ. ಅಂಚೆ ಹಾಗೂ ಸೇವಾ ಮತಗಳ ಎಣಿಕೆ ಕಾರ್ಯ ಮುಗಿದಿದ್ದು, ಇವಿಎಂ ಮತಗಳ ಎಣಿಕೆ ಕಾರ್ಯ ನಡೆಯುತ್ತಿದೆ.
2024ರ ಲೋಕಸಭೆ ಚುನಾವಣೆಯಲ್ಲಿ ರಾಹುಲ್ ಗಾಂಧಿ ಅವರು ಈ ಕ್ಷೇತ್ರದಿಂದ 3.5 ಲಕ್ಷ ಮತಗಳ ಅಂತರದಿಂದ ಜಯಭೇರಿ ಭಾರಿಸಿದ್ದರು. ಆದರೆ ರಾಯಬರೇಲಿ ಕ್ಷೇತ್ರದಿಂದಲೂ ಸ್ಪರ್ಧಿಸಿ ಗೆದ್ದಿದ್ದ ರಾಹುಲ್ ಗಾಂಧಿ ಅವರು, ಅಂತಿಮವಾಗಿ ವಯನಾಡ್ ಕ್ಷೇತ್ರವನ್ನು ಬಿಟ್ಟುಕೊಡಲು ನಿರ್ಧರಿಸಿ ರಾಜೀನಾಮೆ ನೀಡಿದ್ದರು.