Mysore
19
broken clouds

Social Media

ಗುರುವಾರ, 26 ಡಿಸೆಂಬರ್ 2024
Light
Dark

3 ಕ್ಷೇತ್ರದಲ್ಲೂ ಕಾಂಗ್ರೆಸ್‌ ಕಮಲ್‌: ಗ್ಯಾರಂಟಿ, ಅಭಿವೃದ್ಧಿಯ ಗೆಲುವು ಎಂದ ʻಡಿಕೆಶಿʼ

ಬೆಂಗಳೂರು: ರಾಜ್ಯದ ಮೂರು ವಿಧಾನಸಭೆ ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷ ಮುನ್ನಡೆ ಕಾಯ್ದುಕೊಂಡಿದ್ದು, ಗೆಲುವಿನ ದಾಪುಗಾಲು ಇಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್‌ ಮೈತ್ರಿಕೂಟಕ್ಕೆ ಹಿನ್ನಡೆಯಾಗಿದೆ.

ಚನ್ನಪಟ್ಟಣದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಸಿ.ಪಿ ಯೋಗೇಶ್ವರ್‌, ಸಂಡೂರಿನಲ್ಲಿ ಅನ್ನಪೂರ್ಣ ತುಕಾರಂ ಮತ್ತು ಶಿಗ್ಗಾವಿಯಲ್ಲಿ ಯಾಸೀರ ಅಹಮದ್‌ ಖಾನ್‌ ಪಠಾಣ ಮುನ್ನಡೆ ಸಾಧಿಸಿದ್ದು, ಅಧಿಕೃತ ಘೋಷಣೆಯೊಂದೆ ಬಾಕಿಯಿದೆ.

ಮೂರು ಕ್ಷೇತ್ರದ ಗೆಲುವು ಬಹುತೇಕ ಖಚಿತಗೊಂಡಿರುವ ಬೆನ್ನಲ್ಲೇ ಡಿಸಿಎಂ ಡಿಕೆ ಶಿವಕುಮಾರ್‌ ಪ್ರತಿಕ್ರಿಯಿಸಿದ್ದಾರೆ. ಸಾಮಾಜಿಕ ಜಾಲತಾಣ ಮಾಧ್ಯಮದಲ್ಲಿ ಪೋಸ್ಟ್‌ ಮಾಡಿರುವ ಅವರು, ಕಲ್ಯಾಣ ಕರ್ನಾಟಕ, ಕಿತ್ತೂರು ಕರ್ನಾಟಕ, ಹಳೆಯ ಮೈಸೂರು ಭಾಗ ಮತ್ತು ಸಮಗ್ರ ಕರ್ನಾಟಕದ ಅಭಿವೃದ್ಧಿಯ ಗೆಲುವು ಇದಾಗಿದೆ ಎಂದು ಹೇಳಿದ್ದಾರೆ.

Tags: