ಬೆಂಗಳೂರು: ರಾಜ್ಯದಲ್ಲಿ ಚಳಿಗಾಲ ಆರಂಭವಾಗಿದ್ದು, ಈ ನಡುವೆಯೇ ಹಲವು ಜಿಲ್ಲೆಗಳಲ್ಲಿ ಮಳೆ ಮುಂದುವರಿಯಲಿದೆ.
ಡಿಸೆಂಬರ್.5ರ ತನಕ ರಾಜ್ಯದಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇಂದಿನಿಂದ ಡಿಸೆಂಬರ್.5 ರವಗೆಗೆ ಬೆಳಗಾವಿ, ಉತ್ತರ ಕನ್ನಡ, ಹಾವೇರಿ, ವಿಜಯನಗರ, ಶಿವಮೊಗ್ಗ, ಉಡುಪಿ, ಮಂಡ್ಯ, ರಾಮನಗರದಲ್ಲಿ ಮಳೆ ಆಗಲಿದ್ದು, ಜನತೆ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.
ಇನ್ನು ಡಿಸೆಂಬರ್.2ರಿಂದ ಡಿಸೆಂಬರ್.5ರವರೆಗೆ ಕೊಡಗು, ಮೈಸೂರು, ಚಾಮರಾಜನಗರ ಜಿಲ್ಲೆಗಳ ಹಲವೆಡೆ ಸಾಧಾರಣ ಮಳೆಯಾಗಲಿದ್ದು, ಇದರ ಜೊತೆಗೆ ಚಳಿಯ ಅಬ್ಬರವು ಜೋರಾಗಲಿದೆ ಎಂದು ಮಾಹಿತಿ ನೀಡಿದೆ.