ಹಾಸನ: ಶ್ರೇಯಸ್ ಪಟೇಲ್ ಅವರೊಂದಿಗೆ ಹೊಳೆನರಸೀಪುರದ ಶ್ರೇಯಸ್ಸು ಕೂಡ ಅಡಗಿದೆ ಎಂದು ಮಾಜಿ ಶಾಸಕ ಪ್ರೀತಂಗೌಡ ಹೇಳಿದ್ದಾರೆ.
ಈ ಬಗ್ಗೆ ಹೊಳೆನರಸೀಪುರದಲ್ಲಿ ಮಾತನಾಡಿದ ಅವರು, ಮಾಜಿ ಸಚಿವ ಎಚ್.ಡಿ.ರೇವಣ್ಣ ವಿರುದ್ಧ ಪರೋಕ್ಷವಾಗಿ ವಾಗ್ದಾಳಿ ನಡೆಸಿದರು.
ಶ್ರೇಯಸ್ ಅವರೊಂದಿಗೆ ಹೊಳೆನರಸೀಪುರದ ಶ್ರೇಯಸ್ಸು ಕೂಡ ಅಡಗಿದೆ. ಅದರ ಶ್ರೇಯಸ್ಸು ಶ್ರೇಯಸ್ ಪಟೇಲ್‌ಗೂ ಸಲ್ಲುತ್ತದೆ. ಈ ಮೂಲಕ 2024ರ ವಾಸ್ತು, ದಿಕ್ಕು, ದಿಸೆ ಎಲ್ಲಾ ಬದಲಾಗಿದೆ ಎಂದರು.
ಇಲ್ಲಿಯವರೆಗೂ ಕಾರ್ಯಕ್ರಮ ನಡೆಯುವಾಗ ಒಂದು ತೋಟ ಅಥವಾ ಒಂದು ಮನೆಯಲ್ಲಿ ಲೈಟ್ ಇರುತ್ತಿತ್ತು.
ಆದರೆ ಈಗ ಇಡೀ ಹೊಳೆನರಸೀಪುರದಲ್ಲಿ ಲೈಟ್ ಇದೆ. ಇದನ್ನು ನೋಡಿ ನನಗೆ ತುಂಬಾ ಖುಷಿಯಾಯಿತು. ಈಗ ಹೊಳೆನರಸೀಪುರ ಶ್ರೇಯಸ್ ಪಟೇಲ್ ಅವರ ತಾತನ ಕಾಲಕ್ಕೆ ಕೊಂಡ್ಯೊಯ್ದಿದೆ ಎಂದು ಸಂತಸ ವ್ಯಕ್ತಪಡಿಸಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ನಾನು ಒಂದು ಪಕ್ಷದ ಹುದ್ದೆಯಲ್ಲಿದ್ದೇನೆ. ಶ್ರೇಯಸ್ ಪಟೇಲ್ ಬೇರೆ ಪಕ್ಷದಿಂದ ಸ್ಪರ್ಧಿಸಿ ಸಂಸದರಾಗಿದ್ದಾರೆ. ಮಾನವೀಯತೆ ಎನ್ನುವುದು ಬಹಳ ಮುಖ್ಯ. ಎಲ್ಲರೂ ಸೇರಿ ಹೊಳೆನರಸೀಪುರವನ್ನು ಮಾದರಿಯನ್ನಾಗಿ ಮಾಡೋಣ ಎಂದು ಸಲಹೆ ನೀಡಿದರು.