Mysore
22
overcast clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

ಸಂವಿಧಾನ ಪೀಠಿಕೆಯ ಪದಗಳನ್ನು ತೆಗೆದು ಹಾಕಲು ಸಾಧ್ಯವಿಲ್ಲ: ಸುಪ್ರೀಂಕೋರ್ಟ್‌ ಮಹತ್ವದ ತೀರ್ಪು

ಹೊಸದಿಲ್ಲಿ: ಸಂವಿಧಾನ ಪೀಠಿಕೆಯ ಸಮಾಜವಾದಿ(ಸೋಶಿಯಲಿಸ್ಟ್‌) ಹಾಗೂ ಜಾತ್ಯತೀತ (ಸೆಕ್ಯೂಲರ್)‌  ಪದಗಳನ್ನು ತೆಗೆದು ಹಾಕಲು ಸಾಧ್ಯವಿಲ್ಲ. ಸಂಸತ್ತಿನ ತಿದ್ದುಪಡಿ ಅಧಿಕಾರವು ಸಂವಿಧಾನ ಪೀಠಿಕೆಗೂ ವಿಸ್ತರಿಸುತ್ತದೆ ಎಂದು ಸುಪ್ರೀಂಕೋರ್ಟ್‌ ಮಹತ್ವದ ತೀರ್ಪು ನೀಡಿದೆ.

ಹಿರಿಯ ಬಿಜೆಪಿ ನಾಯಕರಾದ ಡಾ.ಸುಬ್ರಮಣಿಯನ್‌ ಸ್ವಾಮಿ, ಬಲರಾಮ್‌ ಸಿಂಗ್‌ ಹಾಗೂ ವಕೀಲರಾದ ಅಶ್ವಿನಿ ಕುಮಾರ್‌ ಉಪಾಧ್ಯಾಯ ಅವರು ಸಂವಿಧಾನ ಪೀಠಿಕೆಯಲ್ಲಿರುವ ಸಮಾಜವಾದಿ ಹಾಗೂ ಜಾತ್ಯತೀತ ಪದಗಳ ಸೇರ್ಪಡೆಯನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು.

ಈ ಅರ್ಜಿಯನ್ನು ಇಂದು (ನ.25) ವಿಚಾರಣೆ ನಡೆಸಿದ ಸಿಜೆಐನ ಮುಖ್ಯ ನ್ಯಾಯಮೂರ್ತಿ ಸಂಜೀವ್‌ ಖನ್ನಾ ಹಾಗೂ ನ್ಯಾಯಮೂರ್ತಿ ಪಿ.ವಿ.ಸಂಜಯ್‌ ಕುಮಾರ್‌ ಅವರಿದ್ದ ದ್ವಿಸದಸ್ಯ ನ್ಯಾಯಪೀಠವೂ ಸಂವಿಧಾನದ 368ನೇ ವಿಧಿಯ ಅಡಿಯಲ್ಲಿ ಸಂವಿಧಾನವನ್ನು ತಿದ್ದುಪಡಿ ಮಾಡಲು ಸಂಸತ್ತಿನ ʼಅವಿವಾದಾತೀತʼ ಅಧಿಕಾರ
ಸಂವಿಧಾನದ ಪೀಠಿಕೆಗೂ ವಿಸ್ತರಿಸುವ ಕಾರಣ ಈ ಪದಗಳನ್ನು ತೆಗೆದು ಹಾಕಲು ಸಾಧ್ಯವಿಲ್ಲ ಎಂದು ಪುನರುಚ್ಚಾರ ಮಾಡಿ ಅರ್ಜಿಯನ್ನು ವಜಾಗೊಳಿಸಿದೆ.

ಇನ್ನು 1976ರಲ್ಲಿ ಅಂದಿನ ಪ್ರಧಾನಿಯಾಗಿದ್ದ ಇಂದಿರಾ ಗಾಂಧಿ ಅವರು ಭಾರತ ಸಂವಿಧಾನಕ್ಕೆ 42ನೇ ತಿದ್ದುಪಡಿಯ ಮೂಲಕ ಸಮಾಜವಾದಿ ಹಾಗೂ ಜ್ಯಾತತೀತ ಪದಗಳನ್ನು ಸೇರಿಸಿದ್ದಾರೆ. ಈ ಪದಗಳು ಸಂವಿಧಾನ ಪೀಠಿಕೆಯ 1949ರ ನವೆಂಬರ್‌ 26ರ ದಿನಾಂಕದ ಮೂಲವನ್ನು ಒಳಗೊಂಡಿದೆ. ಅಲ್ಲದೇ ಈ ಪದಗಳನ್ನು ಸ್ವೀಕರಿಸಿದ ದಿನಾಂಕವು ಸಂವಿಧಾನದ 368ನೇ ವಿಧಿಯ ಅಡಿಯಲ್ಲಿ ಅಧಿಕಾರವನ್ನು ಮೊಟಕುಗೊಳಿಸುವುದಿಲ್ಲ ಅಥವಾ ನಿರ್ಬಂಧಿಸುವುದಿಲ್ಲ. ಹೀಗಾಗಿ ಅವುಗಳನ್ನು ತೆಗೆದು ಹಾಕಲು ಸಾಧ್ಯವಿಲ್ಲ ಎಂದು ಆದೇಶ ಹೊರಡಿಸಿದೆ.

 

Tags: