Mysore
16
overcast clouds

Social Media

ಭಾನುವಾರ, 21 ಡಿಸೆಂಬರ್ 2025
Light
Dark

ಶಾಸಕ ಯತ್ನಾಳ್‌ ಪ್ರತ್ಯೇಕ ಹೋರಾಟ: ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಕಿಡಿ

ಬೆಂಗಳೂರು: ಬಿಜೆಪಿ ಶಾಸಕ ಯತ್ನಾಳ್‌ ವಕ್ಫ್‌ ಆಸ್ತಿ ವಿವಾದ ವಿಚಾರವಾಗಿ ಪ್ರತ್ಯೇಕ ಹೋರಾಟಕ್ಕೆ ಮುಂದಾಗಿರುವ ಬಗ್ಗೆ ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಕಿಡಿಕಾರಿದ್ದಾರೆ.

ಈ ಬಗ್ಗೆ ಇಂದು(ನ.26) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯತ್ನಾಳ್‌ ಸ್ವಪ್ರತಿಷ್ಠೆಗಾಗಿ ಪ್ರತ್ಯೇಕ ಹೋರಾಟ ಮಾಡುತ್ತಿದ್ದಾರೆ. ಇದು ಅವರಿಗೆ ಕ್ಷೋಭೆ ತರುವುದಿಲ್ಲ. ಬಿಜೆಪಿ ಪಕ್ಷದಲ್ಲಿ ಎಲ್ಲರೂ ಸೇರಿ ಸಂಘಟನೆಗೆ ಮನವಿ ಮಾಡಿದ್ದು, ರಾಜಾಧ್ಯಕ್ಷ ವಿಜಯೇಂದ್ರ ಸಹ ಮನವಿ ಮಾಡಿದ್ದಾರೆ. ಆದರೆ ಯತ್ನಾಳ್‌ ಯಾವ ಮನವಿಗೂ ಒಪ್ಪಿಲ್ಲ ಎಂದಿದ್ದಾರೆ.

ಇದೇ ಸಂದರ್ಭದಲ್ಲಿ, ಉಪಚುನಾವಣೆ ಫಲಿತಾಂಶದ ಬಗ್ಗೆ ಶಾಸಕ ಯತ್ನಾಳ್‌ ಅವರ ಹೇಳಿಕೆಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಬಿಜೆಪಿ ಸೋಲಿಗೆ ಬಿ.ಎಸ್‌.ಯಡಿಯೂರಪ್ಪ ಹಾಗೂ ಬಿ.ವೈ.ವಿಜಯೇಂದ್ರ ಕಾರಣವಾಗಿದ್ದಾರೆಂಬ ಪ್ರಶ್ನೆ ಬರುವುದಿಲ್ಲ. ಇಲ್ಲಿ ಪಕ್ಷದ ಎಲ್ಲರು ಜವಾಬ್ದಾರಿ ವಹಿಸಬೇಕು. ಬಿಜೆಪಿಯಲ್ಲಿ ಏನೋ ಲೋಪವಾಗಿದೆ ಈ ಬಗ್ಗೆ ಶಾಸಕರು ಹಾಗೂ ನಾಯಕರ ಕುರಿತು ಚರ್ಚಿಸುತ್ತೇವೆ ಎಂದು ಹೇಳಿದ್ದಾರೆ.

Tags:
error: Content is protected !!