ಮುಂಬೈ: ಮಹಾರಾಷ್ಟ್ರ ಸಿಎಂ ಸ್ಥಾನಕ್ಕೆ ಹಂಗಾಮಿ ಮುಖ್ಯಮಂತ್ರಿಯಾಗಿದ್ದ ಏಕನಾಥ್ ಶಿಂಧೆ ಅವರು ರಾಜ್ಯಪಾಲರಿಗೆ ರಾಜೀನಾಮೆ ನೀಡಿದ್ದಾರೆ.
ಈ ಕುರಿತು ಇಂದು(ನ.26) ಬೆಳಿಗ್ಗೆ ಶಿಂಧೆ ಅವರು, ಡಿಸಿಎಂ ದೇವೇಂದ್ರ ಫಡ್ನವೀಸ್ ಹಾಗೂ ಅಜಿತ್ ಪವಾರ್ ಅವರೊಂದಿಗೆ ರಾಜ್ಯಪಾಲ ಸಿ.ಪಿ.ರಾಧಾಕೃಷ್ಣನ್ ಅವರನ್ನು ಭೇಟಿಯಾಗಿ ರಾಜೀನಾಮೆ ಸಲ್ಲಿಸಿದ್ದಾರೆ.
ಮಹಾರಾಷ್ಟ್ರದಲ್ಲಿ ವಿಧಾನಸಭೆ ಚುನಾವಣೆ ಫಲಿತಾಂಶದ ಬಳಿಕ ರಾಜ್ಯಕ್ಕೆ ನೂತನ ಸಿಎಂ ಪ್ರಮಾಣ ವಚನ ಸ್ವೀಕಾರ ಮಾಡುವವರೆಗೂ ಹಂಗಾಮಿ ಮುಖ್ಯಮಂತ್ರಿಯಾಗಿ ಕಾರ್ಯ ನಿರ್ವಹಿಸುವಂತೆ ಶಿಂಧೆ ಅವರಿಗೆ ರಾಜ್ಯಪಾಲರು ಸೂಚಿಸಿದ್ದರು. ಈ ಆದೇಶದ ಮೇರೆಗೆ ಸಿಎಂ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಶಿಂಧೆ ಅವರು ಇಂದು ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ.