ಚಾಮರಾಜನಗರ: ಪವಾಡ ಪುರುಷ ನೆಲೆಸಿರುವ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುವ ವೇಳೆ ಕಾರೊಂದು ಪಲ್ಟಿಯಾದ ಪರಿಣಾಮ ಓರ್ವ ಸಾವನ್ನಪ್ಪಿದ್ದು, ಮತ್ತೋರ್ವನಿಗೆ ಗಂಭೀರ ಗಾಯಗಳಾಗಿರುವ ಘಟನೆ ತಾಳಬೆಟ್ಟದ ಬಳಿ ನಡೆದಿದೆ.
ಘಟನೆಯಲ್ಲಿ ಕಾರಿನಲ್ಲಿದ್ದ ಪೊಲೀಸ್ ಪೇದೆಯೊಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಹನೂರು ತಾಲ್ಲೂಕಿನ ಮಹದೇಶ್ವರ ಬೆಟ್ಟ, ತಾಳಬೆಟ್ಟ ನಡುವೆ ಈ ಅಪಘಾತ ಸಂಭವಿಸಿದೆ. ಕಾರು ತಲೆ ಕೆಳಗಾಗಿ ಉರುಳಿದ ಪರಿಣಾಮ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ಕಾರಿನಲ್ಲಿದ್ದ ಮೈಸೂರು ನಗರ ಸಂಚಾರ ಪೊಲೀಸ್ ಪೇದೆ ವಿಜಯ್ ಕುಮಾರ್ ಎಂಬುವವರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಈ ಸಂಬಂಧ ಮಹದೇಶ್ವರ ಬೆಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.