ನವದೆಹಲಿ: ಸಿಎಂ ಸಿದ್ದರಾಮಯ್ಯ ನವದೆಹಲಿಯ ಪ್ರವಾಸದಲ್ಲಿದ್ದು ಇಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ರಾಜ್ಯದ ವಿವಿಧ ಯೋಜನೆಗಳ ಬಗ್ಗೆ ಚರ್ಚಿಸಿದ್ದಾರೆ.
ಲೋಕಸಭೆಯ ಸಂಸತ್ ಭವನದಲ್ಲಿ ಇಂದು(ನ.29) ಬೆಳಿಗ್ಗೆ ಸುಮಾರು 11 ಗಂಟೆಗೆ ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿದ ಸಿದ್ದರಾಮಯ್ಯ ಅವರು ರೈತರಿಗೆ ನೀಡುವ ನಬಾರ್ಡ್ ಸಾಲ ಪ್ರಮಾಣ ಹೆಚ್ಚಳ, ಭದ್ರಾ ಮೇಲ್ದಂಡೆ ಯೋಜನೆಯ ಅನುದಾನ, ಮೇಕೆದಾಟು ಹಾಗೂ ಕಳಸಾ-ಬಂಡೂರಿ ಯೋಜನೆಗೆ ಅನುಮತಿ ನೀಡುವಂತೆ ಮನವಿ ಮಾಡಿದ್ದಾರೆ.
ಇದೇ ವೇಳೆ ಕೇಂದ್ರದ 16ನೇ ಹಣಕಾಸು ಆಯೋಗದಿಂದ ರಾಜ್ಯಕ್ಕೆ ಬರಬೇಕಾದ ನ್ಯಾಯಯುತ ತೆರಿಗೆಯನ್ನು ಪಾವತಿಸುವಂತೆ ಕೋರಿ ಪತ್ರದ ಮೂಲಕ ಮನವಿ ಮಾಡಿಕೊಂಡಿದ್ದಾರೆ. ಈ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ಇಂಧನ ಸಚಿವ ಕೆ.ಜೆ.ಜಾರ್ಜ್ ಸಾಥ್ ನೀಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.