Mysore
29
few clouds

Social Media

ಮಂಗಳವಾರ, 11 ಮಾರ್ಚ್ 2025
Light
Dark

ಮುಸ್ಲಿಮರ ಮತದಾನ ಹಕ್ಕು ಮೊಟಕುಗೊಳಿಸುವ ಹೇಳಿಕೆ ವಿಚಾರ: ಪೊಲೀಸರಿಂದ ವಿಚಾರಣೆಗೆ ಹಾಜರಾಗುವಂತೆ ಚಂದ್ರಶೇಖರನಾಥ ಸ್ವಾಮೀಜಿಗೆ ನೋಟಿಸ್‌

ಬೆಂಗಳೂರು: ವಿಶ್ವ ಒಕ್ಕಲಿಗರ ಮಠದ ಚಂದ್ರಶೇಖರನಾಥ ಸ್ವಾಮೀಜಿ ಅವರ ವಿರುದ್ಧ ಉಪ್ಪಾರಪೇಟೆ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದ್ದು, ಡಿಸೆಂಬರ್‌ 2 ರಂದು ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ ನೀಡಲಾಗಿದೆ.

ಈ ಕುರಿತು ಚಂದ್ರಶೇಖರನಾಥ ಸ್ವಾಮೀಜಿ ಅವರಿಗೆ ಸ್ವಾಮೀಜಿ ಅವರಿಗೆ ಇಂದು (ನ.29) ಉಪ್ಪಾರಪೇಟೆ ಠಾಣೆಯ ಪೊಲೀಸರು ಡಿಸೆಂಬರ್‌ 2 ರಂದು ಬೆಳಿಗ್ಗೆ 11 ಗಂಟೆಯ ವೇಳೆಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ ಜಾರಿ ಮಾಡಿದ್ದಾರೆ. ವಕ್ಫ್‌ ಮಂಡಳಿ ವಿರುದ್ಧದ ಪ್ರತಿಭಟನೆಯಲ್ಲಿ ಭಾಗವಹಿಸಿ ಮುಸ್ಲಿಮರ ಮತದಾನ ಹಕ್ಕು ಮೊಟಕುಗೊಳಿಸುವಂತೆ ಹೇಳಿಕೆ ನೀಡಿದ್ದ ಹಿನ್ನೆಲೆಯಲ್ಲಿ ನೋಟಿಸ್‌ ನೀಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಏನಿದು ಪ್ರಕರಣ?
ಚಂದ್ರಶೇಖರನಾಥ  ಸ್ವಾಮೀಜಿ ಅವರು ಇತ್ತೀಚೆಗೆ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆದ ವಕ್ಫ್‌ ಮಂಡಳಿ ವಿರುದ್ಧದ ಪ್ರತಿಭಟನೆಯಲ್ಲಿ ಭಾಗವಹಿಸಿ ಮುಸ್ಲಿಮರಿಗೆ ಮತದಾನದ ಹಕ್ಕು ಇಲ್ಲದಂತೆ ಮಾಡಬೇಕು ಎಂದು ಹೇಳಿಕೆ ನೀಡಿದ್ದರು. ಈ ಹೇಳಿಕೆಯೂ ರಾಜ್ಯಾದ್ಯಾಂತ ಭಾರಿ ಚರ್ಚೆಗೆ ಗ್ರಾಸವಾಗಿ ವಿವಾದಕ್ಕೆ ಕಾರಣವಾಗಿತ್ತು. ಹೀಗಾಗಿ ಚಂದ್ರಶೇಖರನಾಥ ಸ್ವಾಮೀಜಿ ವಿರುದ್ಧ ಉಪ್ಪಾರಪೇಟೆ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಿಸಲಾಗಿತ್ತು. ಈ ಸಂಬಂಧ ಪೊಲೀಸರು ಇಂದು ವಿಚಾರಣೆಗೆ ಹಾಜರಾಗುವಂತೆ ನೊಟೀಸ್‌ ಜಾರಿ ಮಾಡಿದ್ದಾರೆ.

Tags: