ನವದೆಹಲಿ: ರಾಜ್ಯಗಳಿಗೆ ಕೇಂದ್ರ ಸರ್ಕಾರ ಬಿಗ್ ಗಿಫ್ಟ್ ನೀಡಿದ್ದು, 50,571 ಕೋಟಿ ರೂ ಅನುದಾನವನ್ನು ಬಿಡುಗಡೆ ಮಾಡಿದೆ.
ಈ ಬಗ್ಗೆ ಕೇಂದ್ರ ಹಣಕಾಸು ಖಾತೆ ರಾಜ್ಯ ಸಚಿವ ಪಂಕಜ್ ಚೌಧರಿ ಅವರು ಲೋಕಸಭೆಯಲ್ಲಿ ಮಾಹಿತಿ ನೀಡಿದ್ದಾರೆ.
ಅರುಣಾಚಲ ಪ್ರದೇಶ, ಹರಿಯಾಣ, ಕೇರಳ, ಪಂಜಾಬ್, ಮತ್ತು ತೆಲಂಗಾಣ ಹೊರತುಪಡಿಸಿ ಉಳಿದ ಎಲ್ಲಾ ಅಂದರೆ 23 ರಾಜ್ಯಗಳು ಕೇಂದ್ರ ಸರ್ಕಾರ ಒದಗಿಸಿದ ಬಡ್ಡಿ ರಹಿತ ಸೌಲಭ್ಯವನ್ನು ಪಡೆದುಕೊಂಡಿವೆ ಎಂದು ತಿಳಿಸಿದ್ದಾರೆ.
ವಿಶೇಷ ಅನುದಾನದಲ್ಲಿ ಉತ್ತರ ಪ್ರದೇಶ ರಾಜ್ಯಕ್ಕೆ ಅತೀ ಹೆಚ್ಚು ಅಂದರೆ 7,007.93 ಕೋಟಿ, ಮಧ್ಯಪ್ರದೇಶ 5,074.94 ಕೋಟಿ ಅನುದಾನ ಪಡೆದುಕೊಂಡಿವೆ. ಕರ್ನಾಟಕಕ್ಕೆ ಅತಿ ಕಡಿಮೆ ಅಂದರೆ 2272.87 ಕೋಟಿ ಬಿಡುಗಡೆ ಮಾಡಲಾಗಿದೆ.
ಇನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು, ಈ ಬಾರಿಯ ಬಜೆಟ್‌ನಲ್ಲಿ ರಾಜ್ಯಗಳಿಗೆ ಕೇಂದ್ರದ ಬಂಡವಾಳ ಹೂಡಿಕೆಗಾಗಿ ವಿಶೇಷ ನೆರವು ಯೋಜನೆಗೆ 1.5 ಲಕ್ಷ ಕೋಟಿ ಹಂಚಿಕೆ ಮಾಡಿದ್ದರು. ಈ ಬಂಡವಾಳ ಹೆಚ್ಚಿಸಲು 50 ವರ್ಷ ಬಡ್ಡಿ ರಹಿತ ಸಾಲವನ್ನು ಕೇಂದ್ರ ಸರ್ಕಾರ ನೀಡುತ್ತಿರುವುದು ವಿಶೇಷವೆನಿಸಿದೆ.