ಮಂಡ್ಯ: ಕರ್ನಾಟಕ ಸಂಘದ ವತಿಯಿಂದ ಕಾನೂನು ಸೇವಾ, ಕೃಷಿ, ವೈದ್ಯಕೀಯ ಸೇವಾ, ಮತ್ತು ವಿದ್ಯಾರ್ಥಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಡಿಸೆಂಬರ್ ೦೮ರಂದು ಬೆಳಿಗ್ಗೆ ೧೧ ಗಂಟೆಗೆ ನಗರದ ಕೆ.ವಿ.ಶಂಕರಗೌಡ ರೈತ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಅಧ್ಯಕ್ಷ ಪ್ರೊ.ಜಯಪ್ರಕಾಶ್‌ಗೌಡ ತಿಳಿಸಿದರು.
ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಶಸ್ತಿ ಪುರಸ್ಕೃತರಿಗೆ ನ್ಯಾಯಮೂರ್ತಿ ಟಿ.ಜಿ.ಶಿವಶಂಕರೇಗೌಡ ಪ್ರಶಸ್ತಿ ಪ್ರಧಾನ ಮಾಡಲಿದ್ದು, ಕರ್ನಾಟಕ ಸಂಘದ ಅಧ್ಯಕ್ಷ ಪ್ರೊ.ಜಯಪ್ರಕಾಶ್‌ಗೌಡ ಅಧ್ಯಕ್ಷತೆ ವಹಿಸುವರು. ವಿಶ್ರಾಂತ ಪ್ರಾಂಶುಪಾಲ ಡಾ.ಮ.ರಾಮಕೃಷ್ಣ ಅಭಿನಂದನಾ ನುಡಿಗಳನ್ನಾಡಲಿದ್ದು, ಮುಖ್ಯ ಅತಿಥಿಗಳಾಗಿ ಕನಕಪುರದ ರೂರಲ್ ಎಜುಕೇಷನ್ ಸೊಸೈಟಿಯ ಅಧ್ಯಕ್ಷ ಹೆಚ್.ಕೆ.ಶ್ರೀಕಂಠ ಭಾಗವಹಿಸುವರು. ಪ್ರಭಾವತಿ ಹನುಮೇಗೌಡ ಉಪಸ್ಥಿತರಿರುವರು ಎಂದು ವಿವರಿಸಿದರು.
ಪ್ರಭಾವತಿ ಹನುಮೇಗೌಡ ಕಾನೂನು ಸೇವಾ ಪ್ರಶಸ್ತಿಯನ್ನು ವಿಶ್ರಾಂತ ನ್ಯಾಯಮೂರ್ತಿ ಹೆಚ್.ಎನ್.ನಾಗಮೋಹನ್ ದಾಸ್ ಅವರಿಗೆ, ಶಾರದಮ್ಮ ಎಂ.ಎಲ್.ಸುಬ್ಬಣ್ಣ ಕೃಷಿ ಪ್ರಶಸ್ತಿಯನ್ನು ಪ್ರಗತಿಪರ ಕೃಷಿ ಚಂದ್ರಶೇಖರ್ ಅವರಿಗೆ, ವೀಣಾ ಡಾ.ಎಂ.ಮಂಚಯ್ಯ ವೈದ್ಯಕೀಯ ಪ್ರಶಸ್ತಿಯನ್ನು ಆಯುಷ್ ವೈದ್ಯಾಧಿಕಾರಿ ಡಾ.ಅಂಬಿಕಾ ಅವರಿಗೆ, ರತ್ನಮ್ಮ ಕುನ್ನಮರಿಗೌಡ ಕೃಷಿ ಪ್ರಶಸ್ತಿಯನ್ನು ಕನಕಪುರದ ಮಹಿಳಾ ಪ್ರಗತಿಪರ ಕೃಷಿಕರಾದ ಬಿ.ಕೆ.ಪದ್ಮ ಅವರಿಗೆ, ಡಾ.ಸಿ.ಶಿವರಾಮಯ್ಯ ಕೃಷಿ ಪ್ರಶಸ್ತಿಯನ್ನು ಪ್ರೊ.ಎಂ.ಸಿ.ಬೋರೇಗೌಡರಿಗೆ, ಕಾನೂನು ವಿದ್ಯಾರ್ಥಿಗಳಾದ ಪಿ.ಮಂಜುನಾಥ್ ಮತ್ತು ಜಿ.ಎಸ್.ಚೈತ್ರ ಅವರಿಗೆ ವಿದ್ಯಾರ್ಥಿ ಪ್ರತಿಭಾ ಪುರಸ್ಕಾರ ನೀಡಲಾಗುವುದು ಎಂದು ಮಾಹಿತಿ ನೀಡಿದರು.
ಗೋಷ್ಠಿಯಲ್ಲಿ ಡಾ.ಹೆಚ್.ಅನೀಲ್‌ಕುಮಾರ್, ಸಂಘದ ಪ್ರಧಾನ ಕಾರ್ಯದರ್ಶಿ ಹರೀಶ್ ಕುಮಾರ್, ಕಾರ್ಯದರ್ಶಿ ಸೋಮಶೇಖರ್, ನಿರ್ದೇಶಕ ನಾಗಪ್ಪ ಇದ್ದರು.