ಹಾಸನ: ಕೆಪಿಸಿಸಿ ಹಾಗೂ ಸ್ವಾಭಿಮಾನಿ ಸಂಘಟನೆಗಳ ಸಹಯೋಗದಲ್ಲಿ ಹಾಸನದಲ್ಲಿ ಜನಕಲ್ಯಾಣ ಸಮಾವೇಶವನ್ನು ನಾಳೆ(ಡಿ.5) ಆಯೋಜಿಸಲಾಗಿದೆ. ಈ ಬಗ್ಗೆ ಸಿದ್ಧತೆಗಳು ಪೂರ್ಣಗೊಂಡಿವೆ.
ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್, ಸಚಿವ ಸಂಪುಟದ ಸದಸ್ಯರು, ಮುಖಂಡರು ಭಾಗವಹಿಸಲಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿಯೇ ಈ ಸಮಾವೇಶ ನಡೆಯಲಿದ್ದು, ಸುಮಾರು 1 ಲಕ್ಷ ಜನ ಸೇರುವ ನಿರೀಕ್ಷೆ ಇದೆ ಎಂದು ಮೂಲಗಳು ಹೇಳಿವೆ.
70 ಸಾವಿರ ಮಂದಿ ಕುಳಿತುಕೊಳ್ಳಲು ವ್ಯವಸ್ಥೆ ಮಾಡಲಾಗಿದೆ. ಮೂರು ವೇದಿಕೆಗಳನ್ನು ನಿರ್ಮಿಸಲಾಗಿದೆ. ಸುಮಾರು 2 ಸಾವಿರ ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿದೆ. ನಗರದಾದ್ಯಂತ ಫ್ಲೆಕ್ಸ್, ಬಂಟಿಂಗ್‌ಗಳು ರಾರಾಜಿಸುತ್ತಿವೆ.
ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಸರ್ಕಾರದಿಂದ ಜನಕಲ್ಯಾಣಕ್ಕಾಗಿ ಆರಂಭಿಸಿರುವ ಯೋಜನೆಗಳ ಕುರಿತು ಜನರಿಗೆ ಮನವರಿಗೆ ಮಾಡಲು ಹಾಗೂ ಜನರಿಂದ ಸಲಹೆಗಳನ್ನು ಸ್ವೀಕರಿಸಲು ಸಮಾವೇಶ ಆಯೋಜಿಸಲಾಗುತ್ತದೆ ಎಂದು ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ.