Mysore
28
broken clouds

Social Media

ಭಾನುವಾರ, 19 ಏಪ್ರಿಲ 2026
Light
Dark

ಮಂಡ್ಯ: ನೂತನ ಅಪರ ಜಿಲ್ಲಾಧಿಕಾರಿಯಾಗಿ ಶಿವನಂದಮೂರ್ತಿ ನೇಮಕ

ಮಂಡ್ಯ: ಜಿಲ್ಲೆಯ ನೂತನ ಅಪರ ಜಿಲ್ಲಾಧಿಕಾರಿಯಾಗಿ ಕೆಎಎಸ್‌ (ಹಿರಿಯ ಶ್ರೇಣಿ) ಅಧಿಕಾರಿ ಬಿ.ಸಿ ಶಿವಾನಂದಮೂರ್ತಿ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆಯ ಜಂಟಿ ಆಯುಕ್ತರಾಗಿದ್ದ ಶಿವಾನಂದ ಮೂರ್ತಿ ಅವರನ್ನು ಆಡಳಿತಾತ್ಮಕ ಹಿತದೃಷ್ಠಿಯಿಂದ ತಕ್ಷಣ ಜಾರಿಗೆ ಬರುವಂತೆ ಹಿಂದಿನ ಅಪರ ಜಿಲ್ಲಾಧಿಕಾರಿ ಡಾ.ಹೆಚ್‌ ಎಲ್‌ ನಾಗರಾಜು ಅವರ ಜಾಗಕ್ಕೆ ವರ್ಗಾಯಿಸಿ ಸರ್ಕಾರದ ಅಧೀನ ಕಾರ್ಯದರ್ಶಿ ಕೇಶವಪ್ರಸಾದ್‌ ಆದೇಶ ಹೊರಡಿಸಿದ್ದಾರೆ.

ಬಿ.ಸಿ ಶಿವಮೂರ್ತಿ ಅವರು ಈ ಹಿಂದೆ ಪಾಂಡವಪುರ ಉಪವಿಭಾಗಾಧಿಕಾರಿಯಾಗಿ ಕಾರ್ಯ ನಿರ್ವಹಿಸಿದ್ದರು.

ಮಂಡ್ಯ ಜಿಲ್ಲೆಯ ಅಪರ ಜಿಲ್ಲಾಧಿಕಾರಿಯಾಗಿದ್ದ ಡಾ.ಹೆಚ್.ಎಲ್‌ ನಾಗರಾಜು ಅವರು ಸನ್ಯಾಸತ್ವ ಸ್ವೀಕಾರ ಮಾಡುವುದು ಖಚಿತವಾಗಿದ್ದು,  ಹೀಗಾಗಿ ಅವರು ತಮ್ಮ ಕರ್ತವ್ಯಕ್ಕೆ ಸುದೀರ್ಘ ರಜೆ ಹಾಕಿದ್ದಾರೆ ಎನ್ನಲಾಗಿದೆ.

Tags:
error: Content is protected !!