Mysore
28
overcast clouds

Social Media

ಸೋಮವಾರ, 10 ಆಗಸ್ಟ್ 2026
Light
Dark

ಮಾಜಿ ಸಿಎಂ ಬಿಎಸ್‌ವೈ ಪೋಕ್ಸೋ ಕೇಸ್‌: ಇಂದು ಅರ್ಜಿ ವಿಚಾರಣೆ ನಡೆಸಲಿರುವ ಹೈಕೋರ್ಟ್‌

ಬೆಂಗಳೂರು: ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಅವರು ತಮ್ಮ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್‌ನ ಏಕ ಸದಸ್ಯ ಪೀಠವೂ ಇಂದು ವಿಚಾರಣೆ ನಡೆಸಲಿದೆ.

ಈ ಕುರಿತು ಇಂದು(ಡಿ.6) ಹೈಕೋರ್ಟ್‌ನ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ನೇತೃತ್ವದ ಏಕ ಸದಸ್ಯ ಪೀಠವೂ ಮಧ್ಯಾಹ್ನ 2.30 ಗಂಟೆಗೆ ಅರ್ಜಿ ವಿಚಾರಣೆ ನಡೆಸಲಿದ್ದು, ಮಾಜಿ ಸಿಎಂ ಯಡಿಯೂರಪ್ಪ ಪರ ವಕೀಲ ಸಿ.ವಿ.ನಾಗೇಶ್‌ ಅವರು ವಾದ ಮಂಡಿಸಲಿದ್ದಾರೆ. ಪ್ರಕರಣವನ್ನು ದಾಖಲಿಸಿರುವ ಸಿಐಡಿ ತನಿಖಾ ಸಂಸ್ಥೆ ಪರವಾಗಿ ರವಿಮರ್ಮ ಕುಮಾರ್‌ ಹಾಜರಾಗಲಿದ್ದಾರೆ.

ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಅವರು ತಮ್ಮ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಹೈಕೋರ್ಟ್‌ನ ಏಕ ಸದಸ್ಯ ಪೀಠಕ್ಕೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ಅನ್ವಯ ಇಂದು ಜನಪ್ರತಿನಿಧಿಗಳ ನ್ಯಾಯಾಲಯದ ನ್ಯಾಯಾಧೀಶರಾದ ಎಂ.ನಾಗಪ್ರಸನ್ನ ಅವರು ವಿಚಾರಣೆ ನಡೆಸಲಿದ್ದಾರೆ.

ಏನಿದು ಪ್ರಕರಣ?

2024ರ ಮಾರ್ಚ್‌ ತಿಂಗಳಿನಲ್ಲಿ ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಸದಾಶಿವನಗರ ಪೊಲೀಸ್‌ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿತ್ತು. ಈ ದೂರಿನ ಆಧಾರದ ಮೇಲೆ ಎಫ್‌ಐಆರ್‌ ದಾಖಲಿಸಲಾಗಿತ್ತು. ಬಳಿಕ ಈ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿ ತನಿಖೆಗೆ ವರ್ಗಾಯಿಸಲಾಗಿತ್ತು.

Tags:
error: Content is protected !!