Mysore
30
clear sky

Social Media

ಮಂಗಳವಾರ, 11 ಮಾರ್ಚ್ 2025
Light
Dark

ಬೆಂಗಳೂರು: ಜಯನಗರ ಕ್ಷೇತ್ರಕ್ಕೆ 10 ಕೋಟಿ ರೂ.ಅನುದಾನ ಬಿಡುಗಡೆಗೊಳಿಸಿದ ಡಿಸಿಎಂ ಡಿಕೆಶಿ

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಬೆಂಗಳೂರು ಉಸ್ತುವಾರಿ ಸಚಿವರಾದ ಮೇಲೆ ಎಲ್ಲಾ ವಿಧಾನಸಭಾ ಕ್ಷೇತ್ರಗಳಿಗೆ ಅನುದಾನ ಬಿಡುಗಡೆ ಮಾಡಿ ಜಯನಗರ ಕ್ಷೇತ್ರಕ್ಕೆ ಅನುದಾನ ನೀಡಿರಲಿಲ್ಲ. ಆದರೆ ಇದೀಗ ಡಿಕೆಶಿ ಈ ಕ್ಷೇತ್ರಕ್ಕೆ 10 ಕೋಟಿ ರೂಪಾಯಿಯ ಅನುದಾನವನ್ನು ಬಿಡುಗಡೆ ಮಾಡಿದ್ದಾರೆ.

ಈ ಕುರಿತು ಡಿ.ಕೆ.ಶಿವಕುಮಾರ್‌ ಕೊನೆಗೂ ಜಯನಗರ ಕ್ಷೇತ್ರಕ್ಕೆ 10 ಕೋಟಿ ರೂಪಾಯಿಯ ಅನುದಾನವನ್ನು ಬಿಡುಗಡೆ ಮಾಡಿದ್ದು, ಶಾಸಕ ಸಿ.ಕೆ.ರಾಮಮೂರ್ತಿಗೆ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ.

ಡಿ.ಕೆ.ಶಿವಕುಮಾರ್‌ ಅವರು ಎಲ್ಲಾ ವಿಧಾನಸಭಾ ಕ್ಷೇತ್ರಗಳಿಗೆ ಅನುದಾನ ಬಿಡುಗಡೆ ಮಾಡಿ ಜಯನಗರ ಕ್ಷೇತ್ರಕ್ಕೆ ಮಾತ್ರ ಅನುದಾನ ನೀಡಿರಲಿಲ್ಲ. ಈ ಹಿನ್ನೆಲೆಯಲ್ಲಿ ಅನುದಾನ ಬಿಡುಗಡೆ ಮಾಡುವಂತೆ ವಿರೋಧ ಪಕ್ಷದ ನಾಯಕರಾದ ಆರ್‌.ಅಶೋಕ್‌ ಹಾಗೂ ಛಲವಾದಿ ನಾರಾಯಣಸ್ವಾಮಿ ಅವರು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆಶಿಗೆ ಪತ್ರ ಬರೆದು ಆಗ್ರಹಿಸಿದ್ದರು. ಅಲ್ಲದೇ ಅನುದಾನದ ವಿಚಾರವಾಗಿ ಜಯನಗರದಲ್ಲಿ ವಾಸವಾಗಿರುವ ಚಲನಚಿತ್ರ ನಟ, ನಟಿಯರು, ಮತದಾರರು ಹಾಗೂ ಶಾಸಕ ಸಿ.ಕೆ.ರಾಮಮೂರ್ತಿ ಸಹ ಹೋರಾಟ ಮಾಡಿದ್ದರು.

Tags: