ವಿಜಯಪುರ: ಕಾರು ಮತ್ತು ಕಬ್ಬು ಕಟಾವು ಮಷಿನ್ ನಡುವೆ ಭೀಕರ ಅಪಘಾತ ಸಂಭವಿಸಿ ಐವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ವಿಜಯಪುರದಲ್ಲಿ ನಡೆದಿದೆ.
ವಿಜಯಪುರದ ತಾಳಿಕೋಟೆ ತಾಲೂಕಿನ ಬಿಳೆಬಾವಿ ಕ್ರಾಸ್ ಬಳಿ ಈ ಘಟನೆ ನಡೆದಿದೆ. ಮೃತರು ವಿಜಯಪುರದ ಜಿಲ್ಲೆಯ ಅಲಿಯಾಬಾದ್ ನಿವಾಸಿಗಳು ಎಂದು ಗುರುತಿಸಲಾಗಿದೆ.
ಕಾರಿನಲ್ಲಿದ್ದ ಐವರು ಅಸ್ಕಿ ಗ್ರಾಮಕ್ಕೆ ಕನ್ಯೆ ನೋಡಲು ಹೋಗಿದ್ದರು. ವಾಪಸ್ ಬರುವಾರ ಈ ದುರಂತ ಸಂಭವಿಸಿದೆ ಎಂದು ತಿಳಿದು ಬಂದಿದೆ. ಅಪಘಾತದಲ್ಲಿ ಕಾರು ನಜ್ಜು-ಗುಜ್ಜಾಗಿದ್ದು, ಇಬ್ಬರು ಮಹಿಳೆಯರು ಮೂವರು ಪುರುಷರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಸ್ಥಳಕ್ಕೆ ತಾಳಿಕೋಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.





