Mysore
27
scattered clouds

Social Media

ಶುಕ್ರವಾರ, 20 ಡಿಸೆಂಬರ್ 2024
Light
Dark

ಅಲ್ಲಲ್ಲಿ ಗುಂಡಿಬಿದ್ದ ರಸ್ತೆಯಲ್ಲಿ ಸಂಚಾರ ಬಲು ದುಸ್ತರ

ಎಂ. ಆರ್. ಚಕ್ರಪಾಣಿ
ಮದ್ದೂರು: ಪಟ್ಟಣದ ಪೇಟೆ ಬೀದಿಯ ರಸ್ತೆಯಲ್ಲಿ ದೊಡ್ಡ ಗುಂಡಿಗಳು ಬಿದ್ದಿರುವು ದರಿಂದ ವಾಹನ ಸಂಚಾರಕ್ಕೆ ಅಡಚಣೆಯಾಗಿದೆ.

ಪಟ್ಟಣದ ಪೇಟೆ ಬೀದಿಯಲ್ಲಿ ಎರಡು ದಿನಗಳ ಕಾಲ ಬಿದ್ದ ಮಳೆಯಿಂದ ದೊಡ್ಡ ಗುಂಡಿಗಳು ನಿರ್ಮಾಣವಾಗಿವೆ. ಇದರಿಂದ ಸುಗಮ ಸಂಚಾರಕ್ಕೆ ತೊಂದರೆಯಾಗಿದ್ದು, ಶಾಲಾ ಮಕ್ಕಳು, ವೃದ್ಧರು, ಮಹಿಳೆಯರು ಪ್ರತಿನಿತ್ಯ ಓಡಾಡಲು ಹರಸಾಹಸ ಪಡಬೇಕಾದ ದುಸ್ಥಿತಿ ಎದುರಾಗಿದೆ.

ಪಟ್ಟಣದ ಪೇಟೆ ಬೀದಿ ರಸ್ತೆ ಅಗಲೀಕರಣ ಆಗುವ ಸೂಚನೆಯನ್ನು ಶಾಸಕರು, ಜಿಲ್ಲಾಡಳಿತ, ತಾಲ್ಲೂಕು ಆಡಳಿತ ನೀಡಿತ್ತು. ಆದರೆ, ರಸ್ತೆ ಅಗಲೀಕರಣ ಆಗುವ ತನಕವಾದರೂ ರಸ್ತೆಯಲ್ಲಿ ಬಿದ್ದಿರುವ ದೊಡ್ಡ ಗುಂಡಿಗಳನ್ನು ಮುಚ್ಚುವ ಕೆಲಸ ಮಾಡಿಲ್ಲ. ಈ ರಸ್ತೆಯಲ್ಲಿ ವಾಹನ ಸವಾರರು ಗುಂಡಿ ತಪ್ಪಿಸಲು ಹೋಗಿ ಬಿದ್ದು ಗಾಯಗೊಂಡಿರುವ ಘಟನೆಗಳು ನಡೆದಿವೆ. ಈ ರಸ್ತೆ ಕಿರಿದಾಗಿದ್ದು ರಸ್ತೆಯು ಉದ್ದಕ್ಕೂ ಗುಂಡಿಮಯವಾ ಗಿರುವುದರಿಂದ ವಾಹನಗಳು ಇಲ್ಲಿ ಸಂಚರಿಸಲು ಹರಸಾಹಸಪಡಬೇಕಾಗಿದೆ. ಈ ರಸ್ತೆಯ ಸ್ಥಿತಿಯನ್ನು ನೋಡಿ ಸಾರ್ವಜನಿಕರು, ವಾಹನ ಸವಾರರು ಹಿಡಿಶಾಪ ಹಾಕುತ್ತಿದ್ದಾರೆ.

ಗುಂಡಿ ಮುಚ್ಚದೆ ಹಾಗೇ ಬಿಟ್ಟಿದ್ದಾರೆ: ಬಹುತೇಕ ಬಡಾವಣೆಗಳಲ್ಲಿ ರಸ್ತೆಗಳ ಬದಿಗಳಲ್ಲಿ ಕುಡಿಯುವ ನೀರಿನ ಪೈಪ್, ವಿದ್ಯುತ್ ತಂತಿಗಳನ್ನು ಹೂಳಲು ಗುಂಡಿ ತೆಗೆಯಲಾಗಿದೆ. ಕೆಲವು ಕಡೆ ಅವುಗಳನ್ನು ಮುಚ್ಚದೆ ಇರುವುದರಿಂದ ಸಾರ್ವಜನಿಕರ ಸಂಚಾರಕ್ಕೆ ಕಿರಿಕಿರಿಯಾಗಿದೆ. ಆದ್ದರಿಂದ ಸಂಬಂಧಪಟ್ಟ ಅಽಕಾರಿಗಳು ಇತ್ತ ಗಮನಹರಿಸಿ ಹೆಚ್ಚಿನ ಅನಾಹುತಕ್ಕೂ ಮುನ್ನ ಸಾರ್ವಜನಿಕರ ಸುಗಮ ಸಂಚಾರಕ್ಕೆ ಶೀಘ್ರದಲ್ಲೇ ಡಾಂಬರೀಕರಣ ಮಾಡಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಇತ್ತೀಚೆಗೆ ಸುರಿದ ಮಳೆಯಿಂದ ಮದ್ದೂರು ಪಟ್ಟಣದ ಮುಖ್ಯ ರಸ್ತೆಯ ಗುಂಡಿಗಳಲ್ಲಿ ನೀರು ನಿಂತಿದೆ. ಇದರಿಂದ ವಾಹನ ಸವಾರರಿಗೆ ತೊಂದರೆಯಾಗುತ್ತಿದೆ. ಈ ಬಗ್ಗೆ ನನ್ನ ಗಮನಕ್ಕೆ ಬಂದಿದೆ. ಇದನ್ನು ಶಾಸಕರ ಗಮನಕ್ಕೂ ತಂದಿದ್ದು, ಶೀಘ್ರದಲ್ಲೇ ಗುಂಡಿಗಳನ್ನು ಮುಚ್ಚಿಸಿ ಸಾರ್ವಜನಿಕರ ಸುಗಮ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗುವುದು. -ಕೋಕಿಲ ಅರುಣ್, ಅಧ್ಯಕ್ಷರು, ಪುರಸಭೆ ಮದ್ದೂರು.

Tags: