ಮಂಡ್ಯ: ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ಕಾಡಾನೆಯೊಂದು ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ಮಲ್ಲಿಕ್ಯಾತನಹಳ್ಳಿ ಗ್ರಾಮದಲ್ಲಿ ನಡೆದಿದೆ.
15 ವರ್ಷದ ಹೆಣ್ಣಾನೆ ವಿದ್ಯುತ್ ತಂತಿಗೆ ಸಿಲುಕಿ ಬಲಿಯಾಗಿದೆ. ಆನೆ ಸಾವನ್ನಪ್ಪಿರುವುದನ್ನು ಕಂಡು ಸ್ಥಳೀಯರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.
ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಅರಣ್ಯ ಇಲಾಖೆ ಅಧಿಕಾರಿಗಳು ಪರಿಶೀಲನೆ ನಡೆಸಿ ಕಳೆದ ಮೂರು ದಿನಗಳ ಹಿಂದೆಯೇ ಆನೆ ಸಾವನ್ನಪ್ಪಿದೆ ಎಂದು ತಿಳಿಸಿದ್ದಾರೆ.
ಇನ್ನು ಮೃತ ಆನೆಯ ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು, ವರದಿ ಬಂದ ಬಳಿಕವೇ ಸತ್ಯಾಸತ್ಯತೆ ಏನೆಂದು ತಿಳಿಯಲಿದೆ.