Mysore
21
overcast clouds

Social Media

ಗುರುವಾರ, 06 ಆಗಸ್ಟ್ 2026
Light
Dark

ಮಂತ್ರಾಲಯಕ್ಕೆ ಭೇಟಿ ನೀಡಿದ ಸಚಿವ ಎನ್.ಚಲುವರಾಯಸ್ವಾಮಿ ದಂಪತಿ

ರಾಯಚೂರು: ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ದಂಪತಿ ಅವರಿಂದು ಮಂತ್ರಾಲಯಕ್ಕೆ ಭೇಟಿ ನೀಡಿ ಗುರು ರಾಘವೇಂದ್ರ ಸ್ವಾಮಿಗಳ ಮೂಲ ವೃಂದಾವನ ದರ್ಶನ ಪಡೆದು ಪುನೀತರಾದರು.

ಈ ವೇಳೆ ಮೂಲ ವೃಂದಾವನಕ್ಕೆ ಚಲುವರಾಯಸ್ವಾಮಿ ದಂಪತಿ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥ ಶ್ರೀಗಳು ದಂಪತಿಗೆ ಆಶೀರ್ವಚನ  ಹಾಗೂ ಮಂತ್ರಾಕ್ಷತೆ ನೀಡಿ ಆಶೀರ್ವದಿಸಿದರು.

ರಾಯಚೂರು ಕೃಷಿ ವಿವಿಯಲ್ಲಿ ಆಯೋಜಿಸಿರುವ ಕೃಷಿ ಮೇಳಕ್ಕೆ ಸಚಿವ ಚಲುವರಾಯಸ್ವಾಮಿ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಮಂತ್ರಾಲಯದಲ್ಲಿ ರಾಯರ ದರ್ಶನ ಪಡೆದು ರಾಯಚೂರು ಕಡೆ ಪ್ರಯಾಣ ಬೆಳೆಸಿದರು.

 

Tags:
error: Content is protected !!