ಬೆಂಗಳೂರು: ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಮಾತಿಗೆ ಸಚಿವರು ಡೋಂಟ್‌ಕೇರ್ ಎನ್ನುತ್ತಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಲೇವಡಿ ಮಾಡಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸರ್ಕಾರಿ ಆಸ್ಪತ್ರೆಗಳಲ್ಲಿ ಬಾಣಂತಿಯರು ಸಾವನ್ನಪ್ಪುತ್ತಿದ್ದಾರೆ. ಆದರೆ, ಸರ್ಕಾರ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸದೇ ಇರುವುದು ನಾಚಿಕೆಗೇಡಿನ ಸಂಗತಿ. ಸೈನ್ಸ್ ಮುಂದುವರಿದ ಕಾಲದಲ್ಲೂ ಬಳ್ಳಾರಿಯಲ್ಲಿ ಬಾಣಂತಿಯರ ಸಾವು ಸಂಭವಿಸುತ್ತಿರುವುದು ನಾಚಿಕೆಗೇಡಿನ ಸಂಗತಿ ಎಂದು ಕಿಡಿಕಾರಿದರು.
ಬಳ್ಳಾರಿಯಲ್ಲಿ ಬಾಣಂತಿಯರು ಸಾವನ್ನಪ್ಪುತ್ತಿದ್ದರೂ ಸರ್ಕಾರ ಈ ವಿಚಾರವನ್ನು ಗಂಭೀರವಾಗಿ ತೆಗೆದುಕೊಳ್ಳದೇ ಇರುವುದು ನಾಚಿಕೆಗೇಡಿನ ಸಂಗತಿ. ಸಿಎಂ ಸಿದ್ದರಾಮಯ್ಯ ಅವರು ಹೇಳಿದ ಮೂರು ದಿನದ ನಂತರವೂ ಯಾವುದೇ ಸಚಿವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿಲ್ಲ. ಅತ್ಯಂತ ಬೇಜವಾಬ್ದಾರಿತನದಿಂದ ವರ್ತಿಸಿದ ಪ್ರವೃತ್ತಿ ಸರ್ಕಾರಕ್ಕೆ ಶೋಭೆ ತರಲ್ಲ ಎಂದು ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದರು.





