Mysore
17
clear sky

Social Media

ಸೋಮವಾರ, 23 ಡಿಸೆಂಬರ್ 2024
Light
Dark

ಬೆಳಗಾವಿ ಚಳಿಗಾಲ ಅಧಿವೇಶನ ಆರಂಭ

ಬೆಳಗಾವಿ: ಬೆಳಗಾವಿಯ ಸುವರ್ಣಸೌಧದಲ್ಲಿ ಇಂದಿನಿಂದ ಚಳಿಗಾಲದ ಅಧಿವೇಶನ ಆರಂಭವಾಗಿದೆ. ಡಿಸೆಂಬರ್‌ 20ವರೆಗೆ ಚಳಿಗಾಲದ ಅಧಿವೇಶನ ನಡೆಯಲಿದ್ದು, ಆಡಳಿತ ವಿಪಕ್ಷಗಳ ನಡುವೆ ಸದನ ಕದನಕ್ಕೆ ವೇದಿಕೆಯಾಗಲಿದೆ. ಸರ್ಕಾರದ ವಿರುದ್ಧ ಹೋರಾಟಕ್ಕೆ ಹಲವು ಅಸ್ತ್ರಗಳನ್ನು ವಿರೋಧ ಪಕ್ಷಗಳು ತನ್ನ ಬತ್ತಳಿಕೆಯಲ್ಲಿ ಇಟ್ಟುಕೊಂಡಿವೆ.

ಅಧಿವೇಶನದ ಮೊದಲ ದಿನವೇ ವಕ್ಫ್‌ ವಿಚಾರವನ್ನು ಕೈಗೆತ್ತಿಕೊಂಡು ಚರ್ಚೆಗೆ ಅವಕಾಶ ನೀಡುವಂತೆ ಬಿಜೆಪಿ ಪಟ್ಟು ಹಿಡಿಯಲಿದೆ. ನಿಲುವಳಿ ಅಡಿಯಲ್ಲಿ ಚರ್ಚೆಗೆ ಅವಕಾಶ ಕೋರಿ ಗದ್ದಲ ಉಂಟು ಮಾಡುವ ಸಾಧ್ಯತೆ ಇದೆ. ವಕ್ಫ್‌ ಚರ್ಚೆಗೆ ಬಂದರೆ ಎರಡು ದಿನಗಳ ಕಾಲ ಇದೇ ಮುಂದುವರಿಯಲಿದೆ. ನಂತರದಲ್ಲಿ ಸಿಎಂ ಉತ್ತರವೂ ಮಹತ್ವ ಪಡೆದುಕೊಳ್ಳಲಿದೆ.

ವಕ್ಫ್‌ ವಿಚಾರದ ಜೊತೆಗೆ ಬಳ್ಳಾರಿಯಲ್ಲಿ ಬಾಣಂತಿಯರ ಸಾವು ಪ್ರಕರಣವೂ ಸದನವೂ ಸದನದಲ್ಲಿ ಸದ್ದು ಗದ್ದಲಕ್ಕೆ ಕಾರಣವಾಗಲಿದೆ. ಬಳ್ಳಾರಿಯಲ್ಲಿ 5 ಬಾಣಂತಿಯರು ಮೃತಪಟ್ಟಿದ್ದಾರೆ. ಇದು ಗಂಭೀರ ಸ್ವರೂಪವನ್ನು ಪಡೆದುಕೊಂಡಿದೆ. ಹೀಗಾಗಿ ಸದನದಲ್ಲಿ ಚರ್ಚೆಯ ಸಂದರ್ಭದಲ್ಲಿ ಈ ವಿಚಾರಕ್ಕೂ ವಿರೋಧ ಪಕ್ಷಗಳು ಹೆಚ್ಚಿನ ಆದ್ಯತೆಯನ್ನು ನೀಡಲಿದೆ. ಜೊತೆಗೆ ಸಿಎಂ ಸಿದ್ದರಾಮಯ್ಯ ಅವರ ಮುಡಾ ಪ್ರಕರಣ, ವಾಲ್ಮೀಕಿ ನಿಗಮ ಹಗರಣ ಸೇರಿದಂತೆ ಅಬಕಾರಿ ಇಲಾಖೆಯ ಭ್ರಷ್ಟಚಾರ ಸಹ ಮುನ್ನಲೆಗೆ ಬರಲಿದೆ.

ಉತ್ತರ ಕರ್ನಾಟಕದ ಚರ್ಚೆಗೆ ಆದ್ಯತೆ ಸಿಗಲಿ
ಬೆಳಗಾವಿಯ ಅಧಿವೇಶನದ ಮೂಲ ಉದ್ದೇಶ ಉತ್ತರ ಕರ್ನಾಟಕದ ಬಗ್ಗೆ ಚರ್ಚೆ ಆಗಬೇಕು ಎಂಬುವುದಾಗಿದೆ. ಉತ್ತರ ಕರ್ನಾಟಕದಲ್ಲಿ ರೈತರು ಹಾಗೂ ಜನಸಾಮಾನ್ಯರು ಎದುರಿಸುವ ಸಮಸ್ಯೆಗಳ ಬಗ್ಗೆ ಸದನದಲ್ಲಿ ಚರ್ಚೆ ಆಗಬೇಕು. ಈ ಮೂಲಕ ಬೆಳಗಾವಿ ಅಧಿವೇಶನ ಅರ್ಥಪೂರ್ಣ ಆಗಬೇಕು ಎಂಬುವುದು ಉತ್ತರ ಕರ್ನಾಟಕ ಭಾಗದ ಶಾಸಕರ ಬೇಡಿಕೆಯಾಗಿದೆ. ಆದರೆ ಪ್ರತಿವರ್ಷ ಉತ್ತರ ಕರ್ನಾಟಕದ ಚರ್ಚೆಗೆ ಅವಕಾಶ ಸಿಗುವುದೇ ಕೊನೆಯ ಗಳಿಗೆಯಲ್ಲಿ.

Tags: