Mysore
20
overcast clouds

Social Media

ಭಾನುವಾರ, 22 ಡಿಸೆಂಬರ್ 2024
Light
Dark

ಚಳಿಗಾಲದ ಅಧಿವೇಶನ: ಕೈ ಪಕ್ಷದ ಶಾಸಕಾಂಗ ಸಭೆ ಕರೆದ ಸಿಎಂ ಸಿದ್ದರಾಮಯ್ಯ

ಬೆಳಗಾವಿ: ಸುವರ್ಣಸೌಧದಲ್ಲಿ ಇಂದಿನಿಂದ ಚಳಿಗಾಲದ ಅಧಿವೇಶನ ಪ್ರಾರಂಭವಾಗಲಿದೆ. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಕಾಂಗ್ರೆಸ್‌ ಪಕ್ಷದ ಶಾಸಕಾಂಗ ಸಭೆಯನ್ನು ಕರೆದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಸುವರ್ಣಸೌಧದಲ್ಲಿ ಇಂದಿನಿಂದ(ಡಿ.9) ಚಳಿಗಾಲದ ಅಧಿವೇಶನ ಪ್ರಾರಂಭವಾಗಲಿದೆ. ಈ ಅಧಿವೇಶನದಲ್ಲಿ ರಾಜ್ಯ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ಅನೇಕ ಆರೋಪಗಳನ್ನು ಕುರಿತು ಚರ್ಚಿಸುವ ಸಾಧ್ಯತೆ ಇದೆ. ಹೀಗಾಗಿ ವಿಪಕ್ಷಗಳಿಗೆ ಸೂಕ್ತ ಉತ್ತರ ನೀಡುವಂತೆ ಸಿಎಂ ಸಿದ್ದರಾಮಯ್ಯ ಅವರು ಶಾಸಕರಿಗೆ ಮಾರ್ಗದರ್ಶನ ನೀಡಲಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ.

ಈ ಹಿನ್ನೆಲೆಯಲ್ಲಿಸಿಎಂ ಸಿದ್ದರಾಮಯ್ಯ ಅವರು ಜಿಲ್ಲೆಯ ಖಾಸಗಿ ಹೊಟೇಲ್‌ನಲ್ಲಿ ಕೈ ಪಕ್ಷದ ಶಾಸಕಾಂಗ ಸಭೆಯನ್ನು ನಡೆಸಲು ನಾಳೆ(ಡಿ.10) ತೀರ್ಮಾನಿಸಿದ್ದಾರೆ. ಈ ಸಭೆಯಲ್ಲಿ ಕಾಂಗ್ರೆಸ್‌ ಪಕ್ಷದ ಶಾಸಕರು, ಸಂಸದರು ಹಾಗೂ ಪರಿಷತ್‌ ಸದಸ್ಯರು ಭಾಗವಹಿಸಿ ವಿರೋಧ ಪಕ್ಷಗಳಿಗೆ  ಸೂಕ್ತ ಉತ್ತರ ನೀಡಲು ನಿರ್ಧರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

Tags: