ವಿರಾಜಪೇಟೆ: ಹೆದ್ದಾರಿಯಲ್ಲಿ ಗುಂಡಿಯನ್ನು ತಪ್ಪಿಸಲು ಹೋಗಿ ಕೆಎಸ್‌ಆರ್‌ಟಿಸಿ ಬಸ್ಸೊಂದು ಮರಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿರುವ ಘಟನೆ ಗೋಣಿಕೊಪ್ಪ ಹೆದ್ದಾರಿಯಲ್ಲಿ ನಡೆದಿದೆ.
ಮೈಸೂರಿನಿಂದ ವಿರಾಜಪೇಟೆಗೆ ಹೊರಟಿದ್ದ ಬಸ್ ಇದಾಗಿದ್ದು, ಘಟನೆಯಲ್ಲಿ 17ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯಗಳಾಗಿವೆ ಎಂಬ ಮಾಹಿತಿ ಲಭ್ಯವಾಗಿದೆ. ಘಟನೆ ನಡೆಯುತ್ತಿದ್ದಂತೆ ನೆರವಿಗೆ ಧಾವಿಸಿದ ಸ್ಥಳೀಯರು ಸೀಟ್ ಮತ್ತು ಸ್ಟೇರಿಂಗ್ ಮಧ್ಯೆ ಸಿಲುಕಿಕೊಂಡಿದ್ದ ಚಾಲಕನನ್ನು ಹೊರಕ್ಕೆ ತಂದಿದ್ದಾರೆ.
ಇಂದು ರಾತ್ರಿ 8.30ರ ಸಮಯದಲ್ಲಿ ಈ ಘಟನೆ ನಡೆದಿದ್ದು, ಗಾಯಾಳುಗಳನ್ನು ಗೋಣಿಕೊಪ್ಪ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ಸಂಬಂಧ ಗೋಣಿಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.