ಬೆಳಗಾವಿ: ಮಾಜಿ ಸಿಎಂ ಎಸ್.ಎಂ.ಕಷ್ಣ ಅವರು ಇಂದು ನಿಧನರಾದ ಹಿನ್ನೆಲೆ ಅವರ ಪುತ್ಥಳಿಯನ್ನು ವಿಧಾನಸೌಧದ ಆವರಣದಲ್ಲಿ ನಿರ್ಮಾಣ ಮಾಡಬೇಕು ಎಂದು ಸಿಎಂ ಸಿದ್ದರಾಮಯ್ಯ ಅವರಿಗೆ ಸಚಿವ ಎಚ್.ಕೆ.ಪಾಟೀಲ್ ಮನವಿ ಮಾಡಿದ್ದಾರೆ.
ಸುವರ್ಣಸೌಧದಲ್ಲಿ ಇಂದು(ಡಿ.10) ನಡೆದ ಚಳಿಗಾಲದ ಅಧಿವೇಶನದಲ್ಲಿ ಎಸ್.ಎಂ.ಕೃಷ್ಣ ಅವರ ನಿಧನಕ್ಕೆ ಸಂತಾಪ ಸೂಚಿಸಿ ಮಾತನಾಡಿದ ಅವರು, ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರು ಕೇಂದ್ರ ಸಚಿವರಾಗಿ, ರಾಜ್ಯಪಾಲರಾಗಿ, ಮುಖ್ಯಮಂತ್ರಿಯಾಗಿ ಹಾಗೂ ಸಚಿವರಾಗಿ ಕರ್ನಾಟಕ ರಾಜ್ಯಕ್ಕೆ ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದಾರೆ. ಹೀಗಾಗಿ ಎಸ್‌ಎಂಕೆ ಅವರ ಪುತ್ಥಳಿಯನ್ನು ವಿಧಾನಸೌಧದ ಆವರಣದಲ್ಲಿ ನಿರ್ಮಿಸಬೇಕು ಎಂದು ಒತ್ತಾಯಿಸಿದ್ದಾರೆ.
ಇನ್ನು ಆಲಮಟ್ಟಿ ಜಲಾಶಯದ ಕೃಷ್ಣ ನೀರಾವರಿ ಯೋಜನೆ ಪ್ರದೇಶದಲ್ಲಿಯೂ ಸಹ ಅವರ ಸ್ಮಾರಕವನ್ನು ನಿರ್ಮಾಣ ಮಾಡಬೇಕು. ಅವರ ಪುತ್ಥಳಿಯನ್ನು ಸರ್ಕಾರ ನಿರ್ಮಿಸುವುದರಿಂದ ಎಸ್.ಎಂ.ಕೃಷ್ಣ ಅವರ ನೆನಪು ಸದಾಕಾಲ ಉಳಿಯುವಂತೆ ಆಗುತ್ತದೆ ಎಂದು ಹೇಳಿದ್ದಾರೆ.