Mysore
24
broken clouds

Social Media

ಸೋಮವಾರ, 23 ಡಿಸೆಂಬರ್ 2024
Light
Dark

ಹಿರಿಯ ಸಾಹಿತಿ ದೇವನೂರು ಮಹಾದೇವರಿಗೆ ವೈಕಂ ಪ್ರಶಸ್ತಿ

ಮೈಸೂರು: ಹಿರಿಯ ಸಾಹಿತಿ, ಬಂಡಾಯಗಾರ ಹಾಗೂ ದಮನಿತರ ವರ್ಗಗಳ ಕಲ್ಯಾಣಕ್ಕಾಗಿ ಶ್ರಮಿಸಿದ ದೇವನೂರು ಮಹದೇವ ಅವರಿಗೆ ತಮಿಳುನಾಡು ಸರ್ಕಾರವು ವೈಕಂ ಪ್ರಶಸ್ತಿ ಘೋಷಣೆ ಮಾಡಿದೆ.

ಸಮಾಜದಲ್ಲಿ ತುಳಿತಕ್ಕೊಳಗಾದ ಜನರ ಏಳಿಗೆಗಾಗಿ, ಅವರ ಕಲ್ಯಾಣಕ್ಕಾಗಿ ದುಡಿಯುವ ಗಣ್ಯ ವ್ಯಕ್ತಿಗಳು ಅಥವಾ ಸಂಸ್ಥೆಗಳಿಗೆ ವೈಕಂ ಪ್ರಶಸ್ತಿ ನೀಡಲಾಗುತ್ತದೆ. ಕಳೆದ ವರ್ಷ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್‌ ಅವರು ವೈಕಂ ಸತ್ಯಾಗ್ರಹ ಶತಮಾನೋತ್ಸವ ಸಂದರ್ಭದಲ್ಲಿ ಈ ಬಗ್ಗೆ ಘೋಷಿಸಿದ್ದರು.

ತಮಿಳುನಾಡಿನ ತಿರುವಾಂಕೂರು ಸಾಮ್ರಾಜ್ಯದಲ್ಲಿ ಹೆಚ್ಚು ದೇವಾಲಯಗಳಿದ್ದು, ಜಾತಿ ವ್ಯವಸ್ಥೆಯ ದಬ್ಬಾಳಿಕೆಗೆ ಹೆಸರುವಾಸಿಯಾಗಿತ್ತು. ಇದರ ವಿರುದ್ಧ ಹಲವಾರು ನಾಯಕರು ಹೋರಾಟ ಮಾಡಿ ಅಶ್ಪೃಶ್ಯರ ಪ್ರವೇಶಾತಿಗಾಗಿ ಒತ್ತಾಯಿಸಿದ್ದರು. ಈ ಕಾರಣದಿಂದ ವೈಕಂ ಪ್ರಶಸ್ತಿಯನ್ನು ನೀಡಲಾಗುತ್ತದೆ.

ಈ ಪ್ರಶಸ್ತಿಯು ಒಂದು ಲಕ್ಷ ರೂಪಾಯಿ ಚೆಕ್‌ ಮತ್ತು ಪದಕವನ್ನು ಒಳಗೊಂಡಿರುತ್ತದೆ. ಹಾಗೆಯೇ ಐದು ಲಕ್ಷ ರೂಪಾಯಿ ನಗದು ಪ್ರಶಸ್ತಿ ಪುರಸ್ಕೃತರಿಗೆ ಲಭಿಸಲಿದೆ.

ದೇವನೂರು ಮಹಾದೇವ ಅವರು, ಕುಸುಮ ಬಾಲೆ, ಎದೆಗೆ ಬಿದ್ದ ಅಕ್ಷರ, ಆರ್‌ಎಸ್‌ಎಸ್‌ ಆಳ ಮತ್ತು ಅಗಲ, ಒಡಲಾಳ ಪುಸ್ತಕಗಳನ್ನು ಬರೆದಿದ್ದಾರೆ. ಕುಸುಮ ಬಾಲೆ ಕಾದಂಬರಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ದೊರೆತಿದ್ದು, ಕರ್ನಾಟಕ ಸಾಹಿತ್ಯ ಅಕಾಡೆಮಿ, ಪದ್ಮಶ್ರೀ ಪ್ರಶಸ್ತಿಗಳು ಲಭಿಸಿವೆ.

 

Tags: