Mysore
24
overcast clouds

Social Media

ಗುರುವಾರ, 25 ಡಿಸೆಂಬರ್ 2025
Light
Dark

ಡಿಸೆಂಬರ್.‌12ರಂದು ಕೊಡಗು ಬಂದ್‌ಗೆ ಕರೆ: ಕಾರಣ ಇಷ್ಟೇ

ಕೊಡಗು: ವೀರ ಸೇನಾನಿಗಳನ್ನು ಅವಮಾನಿಸಿದ ವಿದ್ಯಾದರ್ ಗಡಿ ಪಾರಿಗೆ ಒತ್ತಾಯಿಸಿ ಡಿಸೆಂಬರ್.‌12ರಂದು ಕೊಡಗು ಬಂದ್‌ಗೆ ಕರೆ ನೀಡಲಾಗಿದೆ.

ವೀರ ಸೇನಾನಿಗಳಾದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಹಾಗೂ ಜನರಲ್ ಕೆ.ಎಸ್.ತಿಮ್ಮಯ್ಯ ಅವರಿಗೆ ಸಾಮಾಜಿಕ ಜಾಲತಾಣಗಳಲ್ಲಿ ಅಗೌರವ ತೋರಿದ ಆರೋಪಿಗೆ ಕಠಿಣ ಶಿಕ್ಷೆ ವಿಧಿಸಬೇಕೆಂದು ಒತ್ತಾಯಿಸಿ ಡಿಸೆಂಬರ್.‌12ರಂದು ಕೊಡಗು ಬಂದ್‌ಗೆ ಕರೆ ನೀಡಲಾಗಿದೆ.

ಕೊಡಗು ಸರ್ವ ಜನಾಂಗಗಳ ಒಕ್ಕೂಟದ ವತಿಯಿಂದ ಡಿ.12 ರಂದು ಬೆಳಿಗ್ಗೆ 6 ಗಂಟೆಯಿಂದ ಮಧ್ಯಾಹ್ನ 12 ಗಂಟೆಯವರೆಗೆ ಕೊಡಗು ಬಂದ್‌ಗೆ ಕರೆ ನೀಡಲಾಗಿದೆ.

ಈ ಬಗ್ಗೆ ಒಕ್ಕೂಟದ ಪ್ರಮುಖರಾದ ರಾಜೀವ್ ಬೋಪಯ್ಯ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ್ದು, ಕೊಡಗು ಜಿಲ್ಲಾ ಬಂದ್ ಆಚರಿಸುವ ಮೂಲಕ ಜಿಲ್ಲೆಯ ಶಾಂತಿಗೆ ಧಕ್ಕೆ ತರುವ ಪ್ರಯತ್ನಗಳು ಮುಂದೆಂದೂ ಆಗಬಾರದು ಎನ್ನುವ ಸಂದೇಶ ರವಾನಿಸಿದ್ದಾರೆ.

ಈ ಮೂಲಕ ಡಿಸೆಂಬರ್.‌12ರಂದು ಮಧ್ಯಾಹ್ನ 12ರವರೆಗೆ ಕೊಡಗು ಜಿಲ್ಲೆ ಸಂಪೂರ್ಣ ಸ್ತಬ್ಧವಾಗಲಿದ್ದು, ಎಲ್ಲರೂ ಬಂದ್‌ಗೆ ಸಹಕಾರ ನೀಡಬೇಕೆಂದು ಮನವಿ ಮಾಡಲಾಗಿದೆ.

 

Tags:
error: Content is protected !!