Mysore
23
haze

Social Media

ಶುಕ್ರವಾರ, 26 ಡಿಸೆಂಬರ್ 2025
Light
Dark

ಎಸ್.ಎಂ.ಕೃಷ್ಣ ವಿಧಿವಶ ಹಿನ್ನೆಲೆ: ನಾಳೆ ಮದ್ದೂರು ಪಟ್ಟಣ ಸ್ವಯಂಪ್ರೇರಿತ ಬಂದ್‌ಗೆ ಕರೆ

ಮಂಡ್ಯ: ಮಾಜಿ ಸಿಎಂ ಎಸ್.ಎಂ.ಕೃಷ್ಣ ವಿಧಿವಶರಾಗಿರುವ ಹಿನ್ನೆಲೆಯಲ್ಲಿ ನಾಳೆ ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ ನೀಡಲಾಗಿದೆ.

ನಾಳೆ ಎಸ್‌.ಎಂ.ಕೃಷ್ಣ ಅವರ ಹುಟ್ಟೂರು ಸೋಮನಹಳ್ಳಿಯಲ್ಲಿ ಅಂತ್ಯಕ್ರಿಯೆ ನೆರವೇರಲಿದೆ. ಈ ಹಿನ್ನೆಲೆಯಲ್ಲಿ ಪ್ರಗತಿಪರ ಸಂಘಟನೆಗಳು ಸ್ವಯಂ ಪ್ರೇರಿತ ಬಂದ್‌ಗೆ ಕರೆ ನೀಡಿವೆ.

ಮದ್ದೂರು ಬಂದ್‌ಗೆ ವರ್ತಕರು, ಬೀದಿ ಬದಿ ವ್ಯಾಪಾರಿಗಳು, ಬಾರ್‌ ಅಂಡ್‌ ರೆಸ್ಟೋರೆಂಟ್‌ ಮಾಲೀಕರ ಸಂಘ ಕೂಡ ಬೆಂಬಲ ಸೂಚಿಸಿವೆ.

ಅಗಲಿದ ನಾಯಕನಿಗೆ ಅಂಗಡಿ ಮುಂಗಟ್ಟು ಮುಚ್ಚಿ ಅಂತಿಮ ನಮನ ಸಲ್ಲಿಸುವಂತೆ ಕರೆ ನೀಡಲಾಗಿದೆ.

Tags:
error: Content is protected !!