ಕೊಳ್ಳೇಗಾಲ: ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷ ಎಸ್.ಜಯಣ್ಣ ಅವರ ಅಂತಿಮ ದರ್ಶನವನ್ನು ಸಿಎಂ ಸಿದ್ದರಾಮಯ್ಯ ಪಡೆದಿದ್ದಾರೆ.
ಮೃತರಾದ ಎಸ್.ಜಯಣ್ಣ ಅವರು ಮಂಗಳವಾರ(ಡಿ.10) ಹೃದಯಾಘಾತದಿಂದ ನಿಧನರಾಗಿದ್ದರು. ಈ ಹಿನ್ನೆಲೆಯಲ್ಲಿ ಇಂದು(ಡಿ.11) ಸಿಎಂ ಸಿದ್ದರಾಮಯ್ಯರವರು ಕೊಳ್ಳೇಗಾಲದ ಮಹದೇಶ್ವರ ಬಡಾವಣೆಯಲ್ಲಿರುವ ನಿವಾಸಕ್ಕೆ ತೆರಳಿ ಜಯಣ್ಣರವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದಿದ್ದಾರೆ.
ಈ ವೇಳೆ ಸಿದ್ದರಾಮಯ್ಯ ಅವರೊಂದಿಗೆ ಸಚಿವರಾದ ವೆಂಕಟೇಶ್, ಎಚ್.ಸಿ.ಮಹದೇವಪ್ಪ, ವಿಧಾನ ಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಹಾಗೂ ಚಾಮರಾಜನಗರ ಜಿಲ್ಲಾಧಿಕಾರಿ ಶಿಲ್ಪಾನಾಗ್ ಅವರು ಮೃತರ ಅಂತಿಮ ದರ್ಶನ ಪಡೆದುಕೊಂಡಿದ್ದಾರೆ.
ಎಸ್. ಜಯಣ್ಣ ಅವರು ಸಿಎಂ ಸಿದ್ದರಾಮಯ್ಯರಿಗೆ ಆಪ್ತರಾಗಿದ್ದರಿಂದ ಕಾರಣ ಇಂದು ಸಿದ್ದರಾಮಯ್ಯ ಅವರು ಮೃತರ ದರ್ಶನ ಪಡೆದಿದ್ದಾರೆ. ಅಲ್ಲದೇ ನಿನ್ನೆ ಮೃತ ಜಯಣ್ಣ ಅವರ ನಿಧನ ಸುದ್ದಿ ಕೇಳಿ ತಮ್ಮ ಎಕ್ಸ್ ಖಾತೆಯಲ್ಲಿ ಸಂತಾಪ ಸೂಚಿಸಿದ್ದಾರೆ.