Mysore
27
broken clouds

Social Media

ಮಂಗಳವಾರ, 09 ಡಿಸೆಂಬರ್ 2025
Light
Dark

ಮುರುಡೇಶ್ವರದಲ್ಲಿ ವಿದ್ಯಾರ್ಥಿನಿಯರ ಮೃತ್ಯು ಪ್ರಕರಣ: ಕಡಲ ತೀರಕ್ಕೆ ಪ್ರವಾಸಿಗರಿಗೆ ತಾತ್ಕಾಲಿಕ ನಿರ್ಬಂಧ

ಭಟ್ಕಳ: ಮುರುಡೇಶ್ವರ ಕಡಲ ತೀರದಲ್ಲಿ ಶಾಲಾ ಪ್ರವಾಸಕ್ಕೆಂದು ಬಂದ ನಾಲ್ವರು ವಿದ್ಯಾರ್ಥಿನಿಯರು ನೀರು ಪಾಲಾಗಿರುವ ಧಾರುಣ ಘಟನೆ ನಡೆದಿದೆ.

ಘಟನೆ ಬಳಿಕ ಮುರುಡೇಶ್ವರ ಕಡಲ ತೀರಕ್ಕೆ ಪ್ರವಾಸಿಗರಿಗೆ ತಾತ್ಕಾಲಿಕ ನಿರ್ಬಂಧ ಹೇರಲಾಗಿದೆ.

ಕೋಲಾರ ಜಿಲ್ಲೆಯ ಮುಳಬಾಗಿಲು ತಾಲ್ಲೂಕಿನ ಕೊತ್ತೂರು ಗ್ರಾಮದ ಮುರಾರ್ಜಿ ದೇಸಾಯಿ ವಸತಿ ಶಾಲೆಯ 54 ವಿದ್ಯಾರ್ಥಿನಿಯರು ಪ್ರವಾಸಕ್ಕಾಗಿ ಮುರುಡೇಶ್ವರಕ್ಕೆ ಭೇಟಿ ನೀಡಿದ್ದರು. ಈ ವೇಳೆ ಸಮುದ್ರದಲ್ಲಿ ಆಟವಾಡಲು ಇಳಿದಾಗ ಈ ದುರ್ಘಟನೆ ಸಂಭವಿಸಿದೆ.

ಅಲೆಗಳ ಅಬ್ಬರಕ್ಕೆ ಸಿಲುಕಿ 7 ವಿದ್ಯಾರ್ಥಿನಿಯರು ಹಾಗೂ ಓರ್ವ ಶಿಕ್ಷಕ ನೀರು ಪಾಲಾಗಿದ್ದು, ಸ್ಥಳೀಯರ ಸಹಕಾರದಿಂದ ಮೂವರು ವಿದ್ಯಾರ್ಥಿನಿಯರು ಹಾಗೂ ಶಿಕ್ಷಕನನ್ನು ರಕ್ಷಣೆ ಮಾಡಲಾಗಿದೆ.

ನಿನ್ನೆ ಓರ್ವ ವಿದ್ಯಾರ್ಥಿನಿ ಮೃತದೇಹ ಪತ್ತೆಯಾದರೆ, ಇಂದು ಉಳಿದ ಮೂವರ ಮೃತದೇಹಗಳು ಪತ್ತೆಯಾಗಿವೆ. ಈ ದುರ್ಘಟನೆಯ ಬಳಿಕ ಮುರುಡೇಶ್ವರ ಕಡಲ ತೀರಕ್ಕೆ ಪ್ರವಾಸಿಗರ ಪ್ರವೇಶವನ್ನು ತಾತ್ಕಾಲಿಕವಾಗಿ ನಿಲ್ಲಿಸಲು ಜಿಲ್ಲಾಡಳಿತ ಆದೇಶ ಹೊರಡಿಸಿದೆ.

ಉತ್ತರ ಕನ್ನಡ ಜಿಲ್ಲಾಡಳಿತ ಈ ಕುರಿತು ತ್ವರಿತ ನಿರ್ಧಾರ ಕೈಗೊಂಡಿದ್ದು, ಮುಂದಿನ ಆದೇಶದವರೆಗೆ ಕಡಲತೀರ ಪ್ರವಾಸಿಗರಿಗೆ ನಿರ್ಬಂಧ ಹೇರಿರುವುದಾಗಿ ತಿಳಿದುಬಂದಿದೆ.

 

 

Tags:
error: Content is protected !!