Mysore
21
mist

Social Media

ಮಂಗಳವಾರ, 06 ಜನವರಿ 2026
Light
Dark

ಬಿಜೆಪಿ ಹಿರಿಯ ನಾಯಕ ಎಲ್.ಕೆ ಅಡ್ವಾಣಿ ಆಸ್ಪತ್ರೆಗೆ ದಾಖಲು

ಹೊಸದಿಲ್ಲಿ : ಭಾರತೀಯ ಜನತಾ ಪಕ್ಷದ(ಬಿಜೆಪಿ) ಹಿರಿಯ ನಾಯಕ ಲಾಲ್ ಕೃಷ್ಣ ಅಡ್ವಾಣಿ ಅವರ ಆರೋಗ್ಯದಲ್ಲಿ ಏರುಪೇರು ಆಗಿರುವ ಹಿನ್ನೆಲೆಯಲ್ಲಿ ಹೊಸದಿಲ್ಲಿಯ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ.

96 ವರ್ಷದ ಅಡ್ವಾಣಿ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.

1972ರ ನವೆಂಬರ್ 8‌ ರಂದು ಅವಿಭಚಿತ ಭಾರತದ ಕರಾಚಿಯಲ್ಲಿ(ಈಗಿನ ಪಾಕಿಸ್ತಾನ) ಜನಿಸಿದ ಅಡ್ವಾಣಿ ಅವರು 1947ರಲ್ಲಿ ರಾಷ್ಟ್ರೀಯ ಸ್ವಯಂಸೇವಕ(ಆರ್‌ಎಸ್‌ಎಸ್‌ಗೆ) ಸೇರಿದರು. ಅಯೋಧ್ಯ ರಾಮಮಂದಿರ ಹೋರಾಟದ ಮೂಲಕ ಹಿಂದುತ್ವದ ಬದ್ಧ ಪ್ರತಿಪಾದಕರಾಗಿದ್ದರು.

ಮೊದಲಿಗೆ ರಾಜಸ್ಥಾನದ ಆರ್‌ಎಸ್‌ಎಸ್‌ ಸಂಘದ ಉಸ್ತುವಾರಿ ವಹಿಸಿಕೊಂಡಿದ್ದ ಅಡ್ವಾಣಿ ನಂತರದ ಬೆಳವಣಿಗೆಯಲ್ಲಿ ಬಿಜೆಪಿ ಪಕ್ಷ ಕಟ್ಟಿ ಬೆಳೆಸಿದರವರಲ್ಲಿ ಪ್ರಮುಖರಾದರು. ಉಪಪ್ರಧಾನಿಯಾಗಿಯೂ ಕೆಲಸ ಮಾಡಿದ್ದರು. ಅವರ ಸೇವೆಗಾಗಿ ಈ ಬಾರಿಯ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಭಾರತ ರತ್ನ ನೀಡಿ ಗೌರವಿಸಲಾಗಿತ್ತು.

Tags:
error: Content is protected !!