ಮಂಡ್ಯ: ಹನುಮ ಜಯಂತಿ ಪ್ರಯುಕ್ತ ಆಯೋಜಿಸಿದ್ದ ಕಬಡ್ಡಿ ಪಂದ್ಯಾವಳಿಯಲ್ಲಿ ಪಾಲ್ಗೊಂಡಿದ್ದ ಆಟಗಾರನೊಬ್ಬ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಸಕ್ಕರೆ ನಾಡು ಮಂಡ್ಯದಲ್ಲಿ ನಡೆದಿದೆ.
ಮಂಡ್ಯ ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಸುಖಧರೆ ಗ್ರಾಮದಲ್ಲಿ ಕಬಡ್ಡಿ ಪಂದ್ಯಾವಳಿ ಆಯೋಜಿಸಲಾಗಿತ್ತು.
ಪಂದ್ಯದಲ್ಲಿ ಪಾಲ್ಗೊಂಡಿದ್ದ ಉಡುಪಿ ಜಿಲ್ಲೆಯ ಹೆಬ್ರಿ ತಾಲ್ಲೂಕಿನ ಮುಟ್ಲುಪಾಡಿಯ ಪ್ರೀತಂಶೆಟ್ಟಿ ಎಂಬುವವರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.
ಸುಖಧರೆ ಗ್ರಾಮದಲ್ಲಿ ಹನುಮ ಜಯಂತಿ ಹಿನ್ನೆಲೆಯಲ್ಲಿ ಕಬಡ್ಡಿ ಪಂದ್ಯಾವಳಿಯನ್ನು ಏರ್ಪಡಿಸಲಾಗಿತ್ತು. ಬಹುನಿರೀಕ್ಷಿತ ಆಟಗಾರನಾಗಿ ಬಂದಿದ್ದ ಪ್ರೀತಂಗೌಡ ಕಬಡ್ಡಿ ಪಂದ್ಯಾಟ ಮುಗಿಸಿ ವಿಶ್ರಾಂತಿಯಲ್ಲಿರುವಾಗ ಹೃದಯಘಾತಕ್ಕೊಳಗಾಗಿದ್ದಾರೆ. ಲೀಗ್, ಸೆಮಿ ಎಲ್ಲಾ ಆಟಗಳನ್ನು ಗೆದ್ದುಕೊಂಡು ಬಂದು ಫೈನಲ್ ಆಟ ಒಂದೇ ಬಾಕಿ ಇತ್ತು. ಅಂತಿಮ ಘಟ್ಟ ತಲುಪುವ ಮೊದಲೇ ಪ್ರೀತಂಶೆಟ್ಟಿ ಸಾವನ್ನಪ್ಪಿದ್ದಾರೆ.