Mysore
34
few clouds

Social Media

ಶನಿವಾರ, 11 ಏಪ್ರಿಲ 2026
Light
Dark

ಕೃಷಿ ಹೊಂಡದಲ್ಲಿ ಸೋಡಿಯಂ ಸ್ಫೋಟ ಪ್ರಕರಣ: ಡ್ರೋನ್‌ ಪ್ರತಾಪ್‌ಗೆ 10 ದಿನ ನ್ಯಾಯಾಂಗ ಬಂಧನ

ತುಮಕೂರು: ಕೃಷಿ ಹೊಂಡದಲ್ಲಿ ಸೋಡಿಯಂ ಸ್ಫೋಟ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಡ್ರೋನ್‌ ಪ್ರತಾಪ್‌ಗೆ ಹತ್ತು ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಮಧುಗಿರಿ ಜೆಎಂಎಫ್‌ಸಿ ಕೋರ್ಟ್‌ ಆದೇಶ ಹೊರಡಿಸಿದೆ.

ಸೋಡಿಯಂ ಮೆಟಲ್‌ ಸ್ಫೋಟ ಪ್ರಕರಣದಲ್ಲಿ ಬಂಧನದಲ್ಲಿದ್ದ ಡ್ರೋನ್‌ ಪ್ರತಾಪ್‌ ಅವರ ಮೂರು ದಿನದ ಪೊಲೀಸ್‌ ಕಸ್ಟಡಿ ಅವಧಿ ಮುಗಿದಿತ್ತು. ಈ ಹಿನ್ನೆಲೆಯಲ್ಲಿ ಇಂದು ಬೆಳಿಗ್ಗೆ ಅವರನ್ನು ಪೊಲೀಸರು ಮಧುಗಿರಿ ಜೆಎಂಎಫ್‌ಸಿ ಕೋರ್ಟ್‌ಗೆ ಹಾಜರುಪಡಿಸಿದ್ದರು.

ಬಳಿಕ ವಾದ ಆಲಿಸಿದ ನ್ಯಾಯಾಧೀಶರು, ಡ್ರೋನ್‌ ಪ್ರತಾಪ್‌ಗೆ 10 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದ್ದಾರೆ.

ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ಆರೋಪಿಯಾಗಿರುವ ಫಾರಂಹೌಸ್‌ ಮಾಲೀಕ ಜಿತೇಂದ್ರ ಜೈನ್‌ ತಲೆ ಮರೆಸಿಕೊಂಡಿದ್ದಾನೆ. ಅವನಿಗಾಗಿ ಹುಡುಕಾಟ ಮುಂದುವರಿದಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಡ್ರೋನ್‌ ಪ್ರತಾಪ್‌ಗೆ ರಿಲೀಫ್‌ ಇಲ್ಲದಂತಾಗಿದ್ದು, ಈ ಬಾರಿ ಜೈಲು ಸಂಕಷ್ಟ ಬಹುತೇಕ ಫಿಕ್ಸ್‌ ಎಂದು ಹೇಳಲಾಗಿದೆ.

Tags:
error: Content is protected !!