Mysore
22
overcast clouds

Social Media

ಸೋಮವಾರ, 18 ಮೇ 2026
Light
Dark

ಬಾಣಂತಿಯರ ಸರಣಿ ಸಾವಿಗೆ ಕಾರಣವಾದ ಜನವಿರೋಧಿ ಕಾಂಗ್ರೆಸ್ ಸರ್ಕಾರ: ವಿಜಯೇಂದ್ರ

ಬೆಳಗಾವಿ: ರಾಜ್ಯದಲ್ಲಿ ಬಾಣಂತಿಯರ ಸಾವಿಗೆ ಕಾರಣವಾದ ಜನವಿರೋಧಿ ಕಾಂಗ್ರೆಸ್‌ ಸರ್ಕಾರಕ್ಕೆ ನನ್ನ ಧಿಕ್ಕಾರವಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಳಗಾವಿಯಲ್ಲಿ ಇಂದು(ಡಿಸೆಂಬರ್‌.16) ಬಾಣಂತಿಯರ ಸರಣಿ ಸಾವು, ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯವನ್ನು ಖಂಡಿಸಿ ಬಿಜೆಪಿ ಮಹಿಳಾ ಮೋರ್ಚಾದ ವತಿಯಿಂದ ಆಯೋಜಿಸಿದ್ದ ಬೃಹತ್ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಆರೋಗ್ಯ ಇಲಾಖೆಯನ್ನು ಸಂಪೂರ್ಣ ಕಡೆಗಣಿಸಿರುವ ಕಾಂಗ್ರೆಸ್‌ ಸರ್ಕಾರದ ಬೇಜವಾಬ್ದಾರಿ ದುರಾಡಳಿತದಲ್ಲಿ ಇಲಾಖೆಯ ಅಕ್ರಮ, ಭ್ರಷ್ಟಾಚಾರಗಳು ಲೋಕಾಯುಕ್ತ ದಾಳಿಯಿಂದ ಬಯಲಾಗುತ್ತಿವೆ ಎಂದು ವಾಗ್ದಾಳಿ ನಡೆಸಿದ್ದಾರೆ.

ನಿರಂತರವಾಗಿ ಬಡಕುಟುಂಬಗಳ ತಾಯಂದಿರು ಹಾಗೂ ಹಸುಗೂಸುಗಳ ಸಾವು ನೋವುಗಳಾಗುತ್ತಿದ್ದರೂ ಬೇಜವಾಬ್ದಾರಿ ವರ್ತನೆ ತೋರುತ್ತಿರುವ ಸರ್ಕಾರದ ಧೋರಣೆ ಖಂಡನೀಯವಾಗಿದೆ. ಶೀಘ್ರವೇ ಮೃತ ತಾಯಂದಿರಿಗೆ ಪರಿಹಾರ ಕಲ್ಪಿಸಿ ಘಟನೆಗಳಿಗೆ ಕಾರಣರಾದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

Tags:
error: Content is protected !!