Mysore
18
overcast clouds

Social Media

ಮಂಗಳವಾರ, 17 ಡಿಸೆಂಬರ್ 2024
Light
Dark

ಜಿಲ್ಲಾ ಉಸ್ತುವಾರಿ ಸಚಿವ ಕ್ಷೇತ್ರದಲ್ಲೇ ಪೊಲೀಸ್‌ ಸಿಬ್ಬಂದಿ ಕೊರತೆ: ಮೂಗೂರು ಪೊಲೀಸ್‌ ಠಾಣೆಗೆ ಬೀಗ

ಮೈಸೂರು: ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್‌.ಸಿ.ಮಹದೇವಪ್ಪ ಕ್ಷೇತ್ರದ ಮೂಗೂರು ಗ್ರಾಮದಲ್ಲಿ ಪೊಲೀಸ್‌ ಸಿಬ್ಬಂದಿ ಕೊರತೆಯಿಂದ ಪೊಲೀಸ್‌ ಠಾಣೆಗೆ ಬೀಗ ಹಾಕಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಜಿಲ್ಲೆಯ ತಿ.ನರಸೀಪುರ ತಾಲ್ಲೂಕಿನ ಮೂಗೂರು ಗ್ರಾಮ ದೊಡ್ಡ ಹೋಬಳಿ ಕೇಂದ್ರವಾಗಿದ್ದು, 40 ವರ್ಷಗಳ ಹಿಂದೆ ಕಾನೂನು ಸುವ್ಯವಸ್ಥೆ ದೃಷ್ಠಿಯಿಂದ ತೆರೆಯಲಾಗಿದ್ದ ಉಪ ಪೊಲೀಸ್‌ ಠಾಣೆಯಲ್ಲಿ ಸಿಬ್ಬಂದಿ ಕೊರತೆಯಿಂದಾಗಿ ಪೊಲೀಸ್‌ ಠಾಣೆಗೆ ಬೀಗ ಹಾಕಲಾಗಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.

ಸಚಿವ ಎಚ್‌.ಸಿ.ಮಹದೇವಪ್ಪ ಪ್ರತಿನಿಧಿಸುವ ಮೂಗೂರು ಕ್ಷೇತ್ರದ ಉಪ ಪೊಲೀಸ್‌ ಠಾಣೆಯಲ್ಲಿ ಪ್ರಸ್ತುತ ಒಬ್ಬ ಮುಖ್ಯ ಪೇದೆ ಹಾಗೂ ಒಬ್ಬ ಪೇದೆ ಮಾತ್ರ ಈ ಠಾಣೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು. ಆದರೆ ಈ ಇಬ್ಬರೂ ಸಿಬ್ಬಂದಿ ಬೇರೆ ಕಡೆಗೆ ಬಂದೋಬಸ್ತ್‌ ಕೆಲಸಕ್ಕಾಗಿ ನಿಯೋಜನೆಗೊಂಡಿದ್ದಾರೆ. ಈ ಮಧ್ಯೆ ಪೊಲೀಸ್‌ ಠಾಣೆಗೆ ಸಿಬ್ಬಂದಿ ನೇಮಕ ಮಾಡಿ. ಈ ಗ್ರಾಮಕ್ಕೆ ಪೊಲೀಸ್‌ ಠಾಣೆ ಇರಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

 

Tags: