Mysore
18
overcast clouds

Social Media

ಮಂಗಳವಾರ, 17 ಡಿಸೆಂಬರ್ 2024
Light
Dark

ಪ್ರಾಥಮಿಕ-ಪ್ರೌಢ ಶಿಕ್ಷಣ ಸಚಿವರೊಂದಿಗೆ ಎ.ಎಸ್‌.ಪೊನ್ನಣ್ಣ ಸಭೆ

ಬೆಳಗಾವಿ: ಪ್ರಾಥಮಿಕ-ಪ್ರೌಢ ಶಿಕ್ಷಣ ಸಚಿವ ಎಸ್‌.ಮಧು ಬಂಗಾರಪ್ಪ ಅವರೊಂದಿಗೆ ಕೊಡಗು ಜಿಲ್ಲಾ ಸರ್ಕಾರಿ ಅನುದಾನಿತ ಹಾಗೂ ಖಾಸಗಿ ಶಾಲಾ-ಕಾಲೇಜುಗಳ ಮೂಲ ಸೌಕರ್ಯ ಮತ್ತು ಬೇಡಿಕೆಗಳ ಕುರಿತು ಸಿಎಂ ಶಾಸಕ ಎ. ಎಸ್. ಪೊನ್ನಣ್ಣ ಸಭೆ ನಡೆಸಿ  ಚರ್ಚಿಸಿದ್ದಾರೆ.

ಸುವರ್ಣಸೌಧದಲ್ಲಿ ಇಂದು(ಡಿಸೆಂಬರ್‌.17) ಈ ಕುರಿತು ಸಚಿವರ ಕೊಠಡಿಯಲ್ಲಿ ಸಭೆ ನಡೆಸಿ ಮಾತನಾಡಿದ ಅವರು, ಕೊಡಗು ಜಿಲ್ಲೆಯ ಅನುದಾನಿತ ಶಾಲಾ- ಕಾಲೇಜುಗಳ ನೌಕರರ ಸಂಘ ಮಡಿಕೇರಿಯೂ ಅನುದಾನಿತ ಕಾಲೇಜು ತರಬೇತಿವಾರು ಕನಿಷ್ಠ 40 ವಿದ್ಯಾರ್ಥಿಗಳನ್ನು ನಿಗದಿಪಡಿಸಿದೆ. ಕೊಡಗು ಜಿಲ್ಲೆ ಗುಡ್ಡಗಾಡು ಪ್ರದೇಶವಾಗಿದ್ದು, ಕನಿಷ್ಠ 40 ವಿದ್ಯಾರ್ಥಿಗಳ ಸಂಖ್ಯೆಯನ್ನು 20 ವಿದ್ಯಾರ್ಥಿಗಳಿಗೆ ಇಳಿಸಬೇಕು. ಉಪನ್ಯಾಸಕರ ವೇತನವನ್ನು ತಡೆಹಿಡಿಯದೆ ವೇತನ ಪಾವತಿಸಬೇಕು. ಪ್ರಜಾ ಪ್ರತಿನಿಧಿ ಕಾಯ್ದೆಯ ತಿದ್ದುಪಡಿ ಅನ್ವಯ ಮಲೆನಾಡು ಜಿಲ್ಲೆಗಳಿಗೆ ರಿಯಾಯಿತಿಯನ್ನು ನೀಡಲಾಗಿದೆ. ಅದೇ ರೀತಿ ಕೊಡಗು ಮತ್ತು ಮಲೆನಾಡು ಜಿಲ್ಲೆಗಳನ್ನು ವಿಶೇಷವಾಗಿ ಪರಿಗಣಿಸಬೇಕು ಎಂದು ಹೇಳಿದ್ದಾರೆ.

ಈ ವೇಳೆ ವಿವಿಧ ಬೇಡಿಕೆಗಳ ಕುರಿತು ಚರ್ಚಿಸಿದ್ದು, ರಾಜ್ಯದ ಶಾಲಾ ಕಾಲೇಜುಗಳಲ್ಲಿ ಕೊಡುವ ಜಾತಿ ಪ್ರಮಾಣ ಪತ್ರಕ್ಕೆ ಕೊಡವ ಎಂದು ನಮೂದಿಸಿ ಅಧಿಸೂಚನೆ ಹೊರಡಿಸುವುದು. ಸಾಂಧೀಪನಿ ವಿದ್ಯಾಪೀಠ ಶಾಲೆ ಕೊಡಗು ಜಿಲ್ಲೆ ಅದರ ಸಮಸ್ಯೆಗಳ ಬಗ್ಗೆ ಹಾಗೂ ತಾಲ್ಲೂಕಿನ ಮೆಕೇರಿ ಗ್ರಾಮದ ಸರ್ವೆ ನಂಬರ್ 99/2 ಜಾಗದಲ್ಲಿ ಸರ್ಕಾರಿ ಶಾಲೆ ನಿರ್ಮಾಣ ಮತ್ತು ಪಂಚಾಯತ್ ಹೆಸರಿಗೆ ಮಂಜೂರು ಮಾಡಬೇಕು. ಅಲ್ಲದೇ ಪ್ರಾಥಮಿಕ ಪ್ರೌಢಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ಮೂಲಸೌಕರ್ಯ ಮತ್ತು ಅನುದಾನ ನೀಡುವಂತೆ ಕೋರಿದ್ದಾರೆ.

ಇದೇ ಸಂದರ್ಭದಲ್ಲಿ ಸಚಿವ ಮಧು ಬಂಗಾರಪ್ಪ ಅವರು, ಮಡಿಕೇರಿ ತಾಲೂಕು ಕೊಯನಾಡು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕಟ್ಟಡ ನಿರ್ಮಾಣದ ಕುರಿತು ವಿಶೇಷವಾಗಿ ಆದ್ಯತೆ ನೀಡಿ ಕ್ರಮವಹಿಸಲಾಗುವುದು ಎಂದು ಭರವಸೆ ನೀಡಿದ್ದಾರೆ.

Tags: