ನವದೆಹಲಿ: ಟೀಮ್ ಆಟಗಾರ ರವಿಚಂದ್ರನ್ ಅಶ್ವಿನ್ ಅವರು ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ದಿಢೀರ್‌ನೇ ನಿವೃತ್ತಿ ಘೋಷಿಸಿದ್ದಾರೆ.
ಆರ್.ಅಶ್ವಿನ್ ಅವರು ಆಸ್ಟ್ರೇಲಿಯಾ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದ ನಂತರ ಇಂದು(ಡಿಸೆಂಬರ್.18) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದು ನಾನು ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸುತ್ತಿದ್ದೇನೆ. ಆದರೆ ನಾನು ಐಪಿಎಲ್ ಪಂದ್ಯಗಳಲ್ಲಿ ಮುಂದುವರೆಯುತ್ತೇನೆ ಎಂದು ತಿಳಿಸಿದ್ದಾರೆ.
ಆರ್.ಅಶ್ವಿನ್ 2010ರಲ್ಲಿ ಅಂತಾರಾಷ್ಟ್ರೀಯ ಕಿಕ್ರೆಟ್‌ಗೆ ಪಾದಾರ್ಪಣೆ ಮಾಡಿದ್ದು, ಟೆಸ್ಟ್ ಕ್ರಿಕೆಟ್‌ನಲ್ಲಿ ಅನಿಲ್ ಕುಂಬ್ಳೆ(619) ಅವರ ನಂತರ ಅತಿ ಹೆಚ್ಚು ವಿಕೆಟ್ ಪಡೆದಿರುವ ಸಾಧನೆಯ ಪೈಕಿಯಲ್ಲಿ ದಾಖಲಾಗಿದ್ದಾರೆ. ಅಲ್ಲದೇ ಅಶ್ವಿನ್ ಭಾರತದ ಪರ 106 ಟೆಸ್ಟ್, 116 ಏಕದಿನ ಹಾಗೂ 65 ಟಿ-20 ಪಂದ್ಯಗಳನ್ಬು ಆಡಿದ್ದಾರೆ.
ಆಲ್‌ರೌಂಡರ್ ಆಗಿರುವ ಅಶ್ವಿನ್(38) ಕೊನೆಯ ಬಾರಿ ಏಕದಿನ ಪಂದ್ಯವನ್ನು ಆಡಿದ್ದು 2023ರಲ್ಲಿ. ಇದಾದ ನಂತರ ಅವರು ಭಾರತ ಏಕದಿನ ತಂಡಕ್ಕೆ ಆಯ್ಕೆಯಾಗಿರಲಿಲ್ಲ. ಅಲ್ಲದೇ 2022ರಲ್ಲಿ ಕೊನೆಯದಾಗಿ ಟಿ-20 ಪಂದ್ಯವಾಡಿ, ಟೀಂ ಇಂಡಿಯಾ ಟೆಸ್ಟ್ ತಂಡದ ಖಾಯಂ ಸದಸ್ಯರಾಗಿದ್ದರು. ಆದರೆ ಇದೀಗ ಅಶ್ವಿನ್ ಅವರು ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ್ದಾರೆ.