Mysore
22
overcast clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

ರಾಜ್ಯ ಸರ್ಕಾರದಿಂದ ಅನ್ನದಾತರಿಗೆ ಗುಡ್‌ ನ್ಯೂಸ್‌

ಬೆಳಗಾವಿ: ರಾಜ್ಯ ಸರ್ಕಾರವು ಅನ್ನದಾತರಿಗೆ ಗುಡ್‌ ನ್ಯೂಸ್‌ ನೀಡಿದ್ದು, ಕೆಐಎಡಿಬಿ ಕೈಗಾರಿಕೆಗಳಲ್ಲಿ ರೈತರಿಗೂ ಸಹಭಾಗಿತ್ವ ನೀಡಲು ಯೋಜನೆ ರೂಪಿಸಿದೆ.

ಈ ಬಗ್ಗೆ ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಮಾತನಾಡಿದ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ್‌ ಮಾಹಿತಿ ನೀಡಿದ್ದು, ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿ ಸ್ವಾಧೀನಪಡಿಸಿಕೊಳ್ಳುವ ಜಮೀನಿನಲ್ಲಿ ಸ್ಥಾಪಿತವಾಗುವ ಕೈಗಾರಿಕೆಗಳಲ್ಲಿ ರೈತರಿಗೂ ಸಹಭಾಗಿತ್ವ ನೀಡಲಾಗುವುದು ಎಂದರು.

ಒಂದು ವೇಳೆ ರೈತರೇ ಕೈಗಾರಿಗೆ ಸ್ಥಾಪಿಸಲು ಮುಂದಾದರೆ ಅದಕ್ಕೆ ನಾವು ನೆರವು ನೀಡುವ ಕುರಿತು ಪರಿಶೀಲನೆ ನಡೆಸುತ್ತೇವೆ ಎಂದು ಹೇಳಿದರು.

ಪ್ರಸ್ತುತ ಇರುವ ಕಾಯ್ದೆಯ ಪ್ರಕಾರ ಕೆಐಎಡಿಬಿ ವಶಪಡಿಸಿಕೊಳ್ಳುವ ಭೂಮಿಗೆ ಮಾರುಕಟ್ಟೆ ದರದಲ್ಲಿ ಪರಿಹಾರ ನೀಡಲಾಗುತ್ತಿದೆ. ಅವರು ಬಯಸಿದರೆ ಅಭಿವೃದ್ಧಿಗೊಳಿಸಿದ ಅವರ ಪ್ರದೇಶದಲ್ಲಿ ಪ್ರತಿ ಎಕರೆಗೆ ಪರ್ಯಾಯವಾಗಿ 10,781 ಚದರ ಅಡಿ ಜಾಗ ನೀಡಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ನಗರಾಭಿವೃದ್ಧಿ ಪ್ರಾಧಿಕಾರಗಳು ರೈತರಿಂದ ಸ್ವಾಧೀನಪಡಿಸಿಕೊಂಡ ಜಮೀನಿನ ಬದಲಿಗೆ ಅಭಿವೃದ್ಧಿಪಡಿಸಲಾದ ನಿವೇಶನಗಳನ್ನು ನೀಡುವ ಮಾದರಿಯಲ್ಲಿ ಕೈಗಾರಿಕಾ ಪ್ರದೇಶದಲ್ಲೂ ರೈತರನ್ನು ಒಳಗೊಳ್ಳುವಂತೆ ಮಾಡಲು ಸೂಕ್ತ ನಿರ್ಧಾರ ರೂಪಿಸಬೇಕಿದೆ ಎಂದು ಹೇಳಿದರು.

 

 

Tags: