Mysore
28
haze

Social Media

ಗುರುವಾರ, 01 ಜನವರಿ 2026
Light
Dark

ಸಮ್ಮೇಳನಕ್ಕೆ ಕ್ಷಣಗಣನೆ | ಸಮ್ಮೇಳನ ಸರ್ವಾಧ್ಯಕ್ಷ ಗೊ.ರು ಚನ್ನಬಸಪ್ಪಗೆ ಆತ್ಮೀಯ ಸ್ವಾಗತ

ಮಂಡ್ಯ: ೮೭ ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕ್ಷಣಗಣನೆ ಆರಂಭವಾಗಿದೆ. ಈ ಹಿನ್ನೆಲೆ ಗುರುವಾರ ಸಂಜೆ ನಗರಕ್ಕೆ ಆಗಮಿಸಿದ ಸಮ್ಮೇಳನದ ಸರ್ವಾಧ್ಯಕ್ಷ ಗೊ.ರು ಚನ್ನಬಸಪ್ಪ ಅವರನ್ನು ಸ್ವಾಗತ ಸಮಿತಿ ಅಧ್ಯಕ್ಷರೂ ಆದ ಸಚಿವ ಎನ್.ಚಲುವರಾಯಸ್ವಾಮಿ ಅವರು ಆತ್ಮೀಯವಾಗಿ ಬರ ಮಾಡಿಕೊಂಡರು.

ನಗರದ ಸಾಂಜೋ ಆಸ್ಪತ್ರೆ ಬಳಿ ಸಮ್ಮೇಳನಾಧ್ಯಕ್ಷರಾದ ಗೊ.ರು ಚನ್ನಬಸಪ್ಪ ಅವರನ್ನು ಪೂರ್ಣಕುಂಭ ಸ್ವಾಗತದೊಂದಿಗೆ ಆತ್ಮೀಯವಾಗಿ ಬರಮಾಡಿಕೊಳ್ಳಲಾಯಿತು. ಈ ವೇಳೆ ಜಾನಪದ ಕಲಾತಂಡಗಳು, ಗಾರುಡಿ ಗೊಂಬೆಗಳು ಮೆರಗು ನೀಡಿದವು.

ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷರಾದ ಡಾ.ಮಹೇಶ್ ಜೋಶಿ, ಶಾಸಕರಾದ ನರೇಂದ್ರ ಸ್ವಾಮಿ , ರವಿಕುಮಾರ್(ಗಣಿಗ), ವಿಧಾನ ಪರಿಷತ್ ಸದಸ್ಯರಾದ ದಿನೇಶ್ ಗೂಳಿಗೌಡ ಜಿಲ್ಲಾಧಿಕಾರಿ ಕುಮಾರ್ , ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ತನ್ವೀರ್ ಆಸೀಫ್ ಮತ್ತಿತರರು ಉಪಸ್ಥಿತರಿದ್ದರು.

Tags:
error: Content is protected !!