ಹೊಸ ವರ್ಷದ ಸಂಭ್ರಮಾಚರಣೆ ಹಿನ್ನೆಲೆಯಲ್ಲಿ ಡಿ. ೩೧ರ ರಾತ್ರಿ ಬೆಂಗಳೂರು, ಮೈಸೂರು ಸೇರಿದಂತೆ ರಾಜ್ಯದ ಹಲವೆಡೆ ರೆಸಾರ್ಟ್ ಗಳು, ಬಾರ್ ಅಂಡ್ ರೆಸ್ಟೋರೆಂಟ್‌ಗಳು ಮತ್ತು ಪಬ್‌ಗಳಲ್ಲಿ ಮಧ್ಯರಾತ್ರಿಯವರೆಗೂ ಮೋಜು ಮಸ್ತಿಯ ಕೂಟಗಳು ನಡೆಯುತ್ತವೆ.
ಈ ಮೋಜು ಮಸ್ತಿಯ ಕೂಟಗಳಲ್ಲಿ ಯುವಜನರು ಹೆಚ್ಚಿನ ಸಂಖ್ಯೆಯಲ್ಲಿ ಭಾಗಿಯಾಗಲಿದ್ದು, ಸಂಭ್ರಮಾಚರಣೆಯ ನೆಪದಲ್ಲಿ ಅತಿಯಾಗಿ ಮದ್ಯಪಾನ, ಮಾದಕ ವಸ್ತುಗಳ ಸೇವನೆ ಮಾಡುತ್ತಾರೆ. ಹಿಂದೆ ಇಂತಹ ಆಚರಣೆ ಸಂದರ್ಭಗಳಲ್ಲಿ ಹೆಣ್ಣು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಪ್ರಕರಣಗಳೂ ವರದಿಯಾಗಿವೆ.
ಆದ್ದರಿಂದ ಈ ಬಾರಿ ಪೊಲೀಸ್ ಇಲಾಖೆ ಎಚ್ಚೆತ್ತುಕೊಂಡು ಸಂಭ್ರಮಾಚರಣೆಗೆ ಕಟ್ಟುನಿಟ್ಟಿನ ಮಾರ್ಗಸೂಚಿಯನ್ನು ಬಿಡುಗಡೆ ಮಾಡಬೇಕಿದೆ. ಮಾದಕ ವಸ್ತುಗಳು ಯುವಕರ ಕೈ ಸೇರದಂತೆ ಎಚ್ಚರವಹಿಸುವ ಜತೆಗೆ, ಅನಽಕೃತವಾಗಿ ನಡೆಯುವ ಕೂಟಗಳಿಗೆ ಕಡಿವಾಣ ಹಾಕಬೇಕು.
-ನಾಗೇಶ್, ಮಾನಸಗಂಗೋತ್ರಿ, ಮೈಸೂರು.



