Mysore
21
overcast clouds

Social Media

ಭಾನುವಾರ, 22 ಡಿಸೆಂಬರ್ 2024
Light
Dark

ಎರಡು ದಿನಗಳ ಕಾಲ ಪ್ರಧಾನಿ ಮೋದಿ ಕುವೈತ್‌ ಪ್ರವಾಸ

ನವದೆಹಲಿ/ಕುವೈತ್‌: ಪ್ರಧಾನಿ ನರೇಂದ್ರ ಮೋದಿ ಅವರು ಇಂದಿನಿಂದ ದ್ವಿಪಕ್ಷೀಯ ಸಂಬಂಧ ಮತ್ತು ಇಂಧನ ಸಹಕಾರ ವೃದ್ಧಿಗಾಗಿ ಎರಡು ದಿನಗಳ ಕಾಲ ಕುವೈತ್‌ ಪ್ರವಾಸ ಕೈಗೊಂಡಿದ್ದಾರೆ ಎಂದು ವಿದೇಶಾಂಗ ವ್ಯವಹಾರ ಸಚಿವಾಲಯ ತಿಳಿಸಿದೆ.

ಈ ಕುರಿತು ವಿದೇಶಾಂಗ ಸಚಿವಾಲಯದ ಕಾರ್ಯದರ್ಶಿ ಅರುಣ್‌ ಕುಮಾರ್‌ ಚಟರ್ಜಿ ಮಾಹಿತಿ ನೀಡಿದ್ದು, ಉಭಯ ರಾಷ್ಟ್ರಗಳ ದ್ವಿಪಕ್ಷೀಯ ಸಂಬಂಧ ಮತ್ತಷ್ಟು ಅಭಿವೃದ್ಧಿಪಡಿಸುವ ಸಲುವಾಗಿ ಮೋದಿ ಅವರು ಭೇಟಿ ನೀಡುತ್ತಿದ್ದಾರೆ. ಪ್ರಧಾನಿ ಮೋದಿ ಕುವೈತ್‌ಗೆ ಭೇಟಿ ನೀಡಿದ ತಕ್ಷಣ ಮೊದಲು ಬಯಾನ್‌ ಅರಮನೆಯಲ್ಲಿ ಗೌರವ ಸ್ವೀಕರಿಸಲಿದ್ದಾರೆ. ಬಳಿಕ ಕುವೈತ್‌ ನಾಯಕತ್ವದೊಂದಿಗೆ ನಡೆಯುವ ಸಭೆಯಲ್ಲಿ ಭಾಗಿಯಾಗಿ ರಾಜಕೀಯ, ವ್ಯಾಪಾರ, ಹೂಡಿಕೆ, ಇಂಧನ, ಸಂಸ್ಕೃತಿ, ಜನರ ನಡುವಿನ ಸಂಬಂಧಗಳು ಹಾಗೂ ಉಭಯ ರಾಷ್ಟ್ರಗಳು ತೆಗೆದುಕೊಳ್ಳಬೇಕಾದ ಕ್ರಮಗಳ ಕುರಿತು ಚರ್ಚಿಸಲಿದ್ದಾರೆ. ಆ ನಂತರ ಔತಣಕೂಟದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ.

ಕುವೈತ್‌ನ ಎಮಿರ್‌ ಶೇಖ್‌ ಮೆಶಾಲ್‌ ಅಲ್‌-ಅಹ್ಮದ್‌ ಅಲ್-ಜಾಬರ್‌ ಅಲ್‌-ಸಬಾಹ್‌ ಅವರ ಆಹ್ವಾನದ ಮೇರೆಗೆ ಪ್ರಧಾನಿ ಮೋದಿ ಅವರು ಇಂದು(ಡಿಸೆಂಬರ್‌.21) ಭೇಟಿ ನೀಡಿದ್ದಾರೆ. ಹೀಗಾಗಿ 43 ವರ್ಷಗಳ ನಂತರ ಭಾರತದಿಂದ ಕುವೈತ್‌ಗೆ ಭೇಟಿ ನೀಡಿದ ಪ್ರಧಾನಿಯಾಗಿದ್ದಾರೆ. ಅಲ್ಲದೇ ಗಲ್ಫ್‌ ರಾಷ್ಟ್ರಕ್ಕೆ ನೀಡುತ್ತಿರುವ ಮೊದಲ ಭೇಟಿಯಾಗಿದೆ. ಆದರೆಡ ಕುವೈತ್‌ನಲ್ಲಿಂದು ನಡೆಯುವ ಹಾಲಾ ಮೋದಿ ಮೆಗಾ ಡಯಾಸ್ಪೊರಾ ಕಾರ್ಯಕ್ರಮಕ್ಕೆ ವೇದಿಕೆ ಸಜ್ಜಾಗಿದ್ದು, ಸುಮಾರು 5,000 ಮಂದಿ ಭಾಗವಹಿಸುವ ನಿರೀಕ್ಷೆಯಿದೆ ಎಂದು ಹೇಳಲಾಗಿದೆ.

Tags: