ಬೆಂಗಳೂರು: ರಾಜರಾಜೇಶ್ವರಿ ನಗರ ಬಿಜೆಪಿ ಶಾಸಕ ಮುನಿರತ್ನ ಅವರ ಮೇಲೆ ಮೊಟ್ಟೆ ಎಸೆದ ಪ್ರಕರಣ ಸಂಬಂಧ ಮೂವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ವಶಕ್ಕೆ ಪಡೆದವರನ್ನು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
ಇಂದು (ಡಿ.25) ಲಕ್ಷ್ಮಿದೇವಿ ನಗರ ವಾರ್ಡ್ ಬಿಜೆಪಿ ಕಚೇರಿಯಲ್ಲಿ ಅಯೋಜಿಸಿದ್ದ ಅಟಲ್ ಬಿಹಾರಿ ವಾಜಪೇಯಿ ಅವರ 100ನೇ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗಿಯಾಗಲು ಶಾಸಕ ಮುನಿರತ್ನ ಹೋಗುತ್ತಿದ್ದ ವೇಳೆ ನಂದಿನಿ ಲೇಔಟ್ ಬಳಿ ಮುನಿರತ್ನ ಅವರ ಮೇಲೆ ಮೊಟ್ಟೆ ಎಸೆಯಲಾಗಿದೆ. ಈ ಸಂಬಂಧ ಮೂವರನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.





