ಬೆಂಗಳೂರು: ಸಕ್ಕರೆ ನಾಡು ಮಂಡ್ಯದಲ್ಲಿ ನಡೆಯುತ್ತಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ವೇದಿಕೆಯನ್ನು ಸಿಎಂ ಸಿದ್ದರಾಮಯ್ಯ ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಬಿಜೆಪಿ ಗಂಭೀರ ಆರೋಪ ಮಾಡಿದೆ.
ಸಿಎಂ ಸಿದ್ದರಾಮಯ್ಯ ಅವರು, ಮಂಡ್ಯದಲ್ಲಿ ನಡೆಯುತ್ತಿರುವ ಕನ್ನಡ ಸಾಹಿತ್ಯ ಸಮ್ಮೇಳನದ ವೇದಿಕೆಯಲ್ಲಿ ರಾಜಕೀಯ ಭಾಷಣ ಮಾಡಿದ್ದಾರೆ ಎಂದು ಅಸಮಾಧಾನ ಹೊರಹಾಕಿದೆ.
ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡ ಸಾಹಿತ್ಯ ಪರಂಪರೆ, ಕನ್ನಡದ ಮಹತ್ವ, ಕನ್ನಡದ ಬೆಳವಣಿಗೆ, ಕನ್ನಡದ ಅಸ್ಮಿತೆಯ ಕುರಿತು ಚರ್ಚೆ ಆಗಬೇಕಿತ್ತು.
ಆದರೆ ಈ ಭ್ರಷ್ಟ ಸಿಎಂ ಸಿದ್ದರಾಮಯ್ಯ ಅವರು ತಮ್ಮ ರಾಜಕೀಯ ವೇದಿಕೆಯನ್ನಾಗಿ ಮಾಡಿಕೊಂಡಿದ್ದಾರೆ. ಕರ್ನಾಟಕಕ್ಕಿಂತ ಕೇರಳದ ಮೇಲೆ ಪ್ರೀತಿ, ಮಮಕಾರ ತೋರುವ ಸಿದ್ದರಾಮಯ್ಯ ಅವರು, ಸಾಹಿತ್ಯ ಸಮ್ಮೇಳನದ ವೇದಿಕೆಗೆ ಕನ್ನ ಹಾಕಿ ದ್ರೋಹ ಮಾಡಿದ್ದಾರೆ. ಈ ಮೂಲಕ ವೇದಿಕೆಯನ್ನು ದುರುಪಯೋಗ ಪಡಿಸಿಕೊಂಡು ಕನ್ನಡಕ್ಕೆ ಅವಮಾನ ಮಾಡಿದ್ದೀರಿ ಎಂದು ಬಿಜೆಪಿ ಟ್ವೀಟ್ ಮಾಡಿ ಆಕ್ರೋಶ ಹೊರಹಾಕಿದೆ.