13 ವರ್ಷದ ವೈಭವ್ ಸೂರ್ಯವಂಶಿ ಐಪಿಎಲ್ ಹರಾಜಿನಲ್ಲಿ 1.10 ಕೋಟಿಗೆ ರಾಜಸ್ಥಾನ ತಂಡಕ್ಕೆ ಹರಾಜಾಗುವ ಮೂಲಕ ಕಿರಿಯ ವಯಸ್ಸಿಗೆ ಐಪಿಎಲ್‌ಗೆ ಕಾಲಿಟ್ಟ ಭಾರತೀಯ ಕ್ರಿಕೆಟಿಗ ಎಂಬ ದಾಖಲೆ ಬರೆದಿದ್ದರು.
ಈಗ ವಿಜಯ ಹಜಾರೆ ಟ್ರೋಫಿಯಲ್ಲಿ ಬಿಹಾರ ತಂಡದ ಪರವಾಗಿ ಕಣಕ್ಕಿಳಿಯುವ ಮೂಲಕ ಲಿಸ್ಟ್-ಎನಲ್ಲಿ ಆಡಿದ ಅತ್ಯಂತ ಕಿರಿಯ ಆಟಗಾರ ಎನಿಸಿಕೊಂಡಿದ್ದಾರೆ.
ಹೈದರಾಬಾದ್‌ನಲ್ಲಿ ನಡೆಯುತ್ತಿರುವ ವಿಜಯ್ ಹಜಾರೆ ಟ್ರೋಫಿಯಲ್ಲಿ ಬಿಹಾರ ತಂಡದ ಪರ ಆಡಿದ ವೈಭವ್ ಸೂರ್ಯವಂಶಿ, ಕೇವಲ 2 ಎಸೆತಗಳಲ್ಲಿ 4 ರನ್‌ಗಳಿಸಿ ಔಟಾದರು. ಈ ಪಂದ್ಯದಲ್ಲಿ ಬಿಹಾರ ತಂಡವು ಮಧ್ಯಪ್ರದೇಶದ ವಿರುದ್ಧ 6 ವಿಕೆಟ್‌ಗಳ ಸೋಲನ್ನು ಕಂಡಿತು.