ಮೈಸೂರು: ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಇಂದು(ಡಿ.23) ಮೈಸೂರಿನ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರ ಕಛೇರಿ ಆವರಣದಲ್ಲಿ ‘ಡಾ.ಬಿ.ಆರ್.ಅಂಬೇಡ್ಕರ್’ ಮತ್ತು ‘ಡಾ.ಬಾಬು ಜಗಜೀವನರಾಂ’ ಅವರ ಪ್ರತಿಮೆಯನ್ನು ಅನಾವರಣಗೊಳಿಸಿದರು.
ಬಳಿಕ ನವೀಕರಣಗೊಂಡ ಕಚೇರಿಯನ್ನು ಉದ್ಘಾಟಿಸಿದರು.
ಈ ವೇಳೆ ಶಾಸಕ ಶ್ರೀವತ್ಸ, ವಿಧಾನ ಪರಿಷತ್ ಸದಸ್ಯ ಸಿ.ಎನ್.ಮಂಜೇಗೌಡ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷೆ ಡಾ.ಪುಷ್ಪ ಅಮರನಾಥ್, ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ ರೆಡ್ಡಿ, ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್, ಜಿಲ್ಲಾ ಪಂಚಾಯತ್ ಸಿಇಒ ಕೆ.ಎಂ.ಗಾಯಿತ್ರಿ, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ರಂಗೇಗೌಡ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.