ಮೈಸೂರು: ಹೊಸ ವರ್ಷ 2025ರ ಆಗಮನಕ್ಕೆ ಇನ್ನೇನು ಕೆಲವೇ ದಿನಗಳು ಬಾಕಿಯಿದ್ದು, ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಜನತೆ ಸಂಭ್ರಮಾಚರಣೆ ಮಾಡಲು ಸಿದ್ಧರಾಗುತ್ತಿದ್ದಾರೆ.
ಈ ಹಿನ್ನೆಲೆಯಲ್ಲಿ ಸಂಭ್ರಮಾಚರಣೆ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಇನ್ನು ಸಿಲಿಕಾನ್ ಸಿಟಿ ಬೆಂಗಳೂರಿನಲ್ಲೂ ಕೂಡ 36 ಅಂಶಗಳನ್ನು ಒಳಗೊಂಡ ಗೈಡ್‌ಲೈನ್ಸ್ ಅನ್ನು ಬಿಡುಗಡೆ ಮಾಡಲಾಗಿದ್ದು, ಭಾರೀ ಎಚ್ಚರಿಕೆ ವಹಿಸುವಂತೆ ಸೂಚನೆ ನೀಡಲಾಗಿದೆ.
ಅತ್ಯಂತ ಪ್ರಮುಖವಾಗಿ ಭಯೋತ್ಪಾದಕ ಚಟುವಟಿಕೆಗಳು ಹಾಗೂ ಕೆಲವು ಸಮಾಜ ಘಾತುಕ ಚಟುವಟಿಕೆಗಳು ಶಾಂತಿಗೆ ಭಂಗವನ್ನುಂಟುಮಾಡುವ ಸಾಧ್ಯತೆ ಇರುವುದರಿಂದ ಎಚ್ಚರಿಕೆ ವಹಿಸುವಂತೆ ಸೂಚನೆ ನೀಡಲಾಗಿದೆ.
ಹೊಸ ವರ್ಷದ ಸಂಭ್ರಮಾಚರಣೆ ವೇಳೆ ಕಿಡಿಗೇಡಿಗಳು ಅಟ್ಟಹಾಸ ಮೆರೆಯುವ ಸಾಧ್ಯತೆ ಇರುವುದರಿಂದ ಅಂತಹವರ ಬಗ್ಗೆ ಹೆಚ್ಚು ಹೆಚ್ಚು ಜಾಗ್ರತೆ ವಹಿಸುವಂತೆ ಸೂಚನೆ ನೀಡಲಾಗಿದೆ.
ಇನ್ನು ಬೆಂಗಳೂರಿನ ಮಾಲ್‌ಗಳು, ಹಾಗೂ ಹೋಟೆಲ್‌ಗಳಿಗೂ ಎಚ್ಚರಿಕೆ ನೀಡಲಾಗಿದ್ದು, ಪೊಲೀಸರು ಲಾಠಿಗಳನ್ನು ಹೊಂದಿರಬೇಕು ಎಂದು ಸೂಚನೆ ನೀಡಲಾಗಿದೆ.
ಬೆಂಗಳೂರಿನ ಪ್ರಮುಖ ರಸ್ತೆಗಳಲ್ಲಿ ವಿದ್ಯುತ್ ದೀಪಗಳು ಆನ್ ಇರುವಂತೆ ನೋಡಿಕೊಳ್ಳಬೇಕು. ಪ್ರಮುಖವಾಗಿ ಬ್ರಿಗೇಡ್ ರಸ್ತೆ, ಎಂ.ಜಿ.ರಸ್ತೆ ಸೇರಿದಂತೆ ಇತರೆಡೆ ಜನರ ಆಗಮನ ಮತ್ತು ನಿರ್ಗಮನಕ್ಕೆ ಸೂಕ್ತ ಕ್ರಮ ಕೈಗೊಳ್ಳುವ ಕುರಿತು ಕಮಿಷನರ್ ದಯಾನಂದ್ ಮಾಹಿತಿ ನೀಡಿದ್ದಾರೆ.