Mysore
18
broken clouds

Social Media

ಗುರುವಾರ, 18 ಡಿಸೆಂಬರ್ 2025
Light
Dark

ನಾಳೆ ಬೆಳಿಗ್ಗೆ 11 ಗಂಟೆಗೆ ಪ್ರಧಾನಿ ಮೋದಿ ಮನ್‌ ಕಿ ಬಾತ್‌ ಕಾರ್ಯಕ್ರಮ

ನವದೆಹಲಿ: ನಾಳೆ ಆಕಾಶವಾಣಿಯ ಮನ್‌ ಕಿ ಬಾತ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಆಲೋಚನೆಗಳ್ನು ಹಂಚಿಕೊಳ್ಳಲಿದ್ದಾರೆ.

ನಾಳೆ ಬೆಳಿಗ್ಗೆ ಗಂಟೆಗೆ ಆಕಾಶವಾಣಿಯಲ್ಲಿ ಪ್ರಸಾರವಾಗಲಿರುವ ಮನ್‌ ಕಿ ಬಾತ್‌ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ದೇಶ ಮತ್ತು ವಿದೇಶದ ಜನರೊಂದಿಗೆ ತಮ್ಮ ಅಭಿಪ್ರಾಯ ಹಂಚಿಕೊಳ್ಳಲಿದ್ದಾರೆ. ಇದು ಮಾಸಿಕ ರೇಡಿಯೋ ಕಾರ್ಯಕ್ರಮದ 117ನೇ ಸಂಚಿಕೆಯಾಗಿದೆ.

ಇನ್ನು ದೇಶದಲ್ಲಿ ಮೂರನೇ ಬಾರಿಗೆ ಅಧಿಕಾರಕ್ಕೆ ಬಂದಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ ಜನರ ಜನಪ್ರಿಯತೆ ಗಳಿಸುವತ್ತ ದಾಪುಗಾಲು ಹಾಕುತ್ತಿದೆ.

ಮೂರನೇ ಬಾರಿಗೆ ಪ್ರಧಾನಿ ಹುದ್ದೆ ಅಲಂಕರಿಸಿದ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರು, ನಾಳೆ ಐದನೇ ಮನ್‌ ಕಿ ಬಾತ್‌ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ.

ಈ ಮೂಲಕ ಕಳೆದ 10 ವರ್ಷಗಳಿಂದ ಪ್ರಧಾನಿ ನರೇಂದ್ರ ಮೋದಿ ಅವರು ಮಾಸಿಕ ರೇಡಿಯೋ ಕಾರ್ಯಕ್ರಮದ 116ನೇ ಸಂಚಿಕೆಯಲ್ಲಿ ದೇಶದ ಕುರಿತು ಸಂತಸ ಹಂಚಿಕೊಂಡಿದ್ದಾಳೆ.

ನಾಳೆ 117ನೇ ಸಂಚಿಕೆ ನಡೆಯಲಿದ್ದು, ಇದರಲ್ಲಿ ಬಹುಮುಖ್ಯವಾಗಿ ಏನೆಲ್ಲಾ ವಿಚಾರ ಚರ್ಚೆಯಾಗಲಿದೆ ಎಂಬುದನ್ನು ಕಾದುನೋಡಬೇಕಿದೆ.

Tags:
error: Content is protected !!